• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ: ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಕ್ಷಣ ಜಾರಿಗೆ ತರಲು ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಣ್ಣ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ: ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಕ್ಷಣ ಜಾರಿಗೆ ತರಲು ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಆದೇಶ
0
SHARES
29
VIEWS
Share on FacebookShare on Twitter
  • 9 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ಮಕ್ಕಳಿಗೂ (helmets mandatory for kids) ಹೆಲ್ಮೆಟ್ ಕಡ್ಡಾಯ
  • ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಪ್ರಯಾಣಿಸುವಾಗ ಸುರಕ್ಷತಾ ಪರಿಕರ ಬಳಕೆ ಕಡ್ಡಾಯ
  • 6 ತಿಂಗಳಲ್ಲಿ ಸಂಪೂರ್ಣ ಅನುಷ್ಠಾನಕ್ಕೆ ಸೂಚನೆ

Bengaluru: ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಲು

(helmets mandatory for kids) ಕೇಂದ್ರ ಮೋಟಾರು

ವಾಹನ (ಎರಡನೇ ತಿದ್ದುಪಡಿ) ನಿಯಮಗಳು, 2022ರ ಸೆಕ್ಷನ್ 138(7)ರ ಅನುಷ್ಠಾನದ ವಿಚಾರ ಮತ್ತೆ ಗಂಭೀರತೆ ಪಡೆದುಕೊಂಡಿದೆ.

ಈ ನಿಯಮಗಳನ್ನು ತಕ್ಷಣ ಜಾರಿಗೆ ತರಲು ಸರ್ಕಾರಕ್ಕೆ ಹೈಕೋರ್ಟ್ ಕಠಿಣ ನಿರ್ದೇಶನ ನೀಡಿದೆ.

helmets mandatory for kids

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರನ್ನೊಳಗೊಂಡ ಪೀಠ, (helmets mandatory for kids)

ಈ ಸಂಬಂಧ 2023ರಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಅರ್ಚನಾ ಭಟ್ ಕೆ. ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಮಕ್ಕಳಿಗಾಗಿ ಮಾಡಿದ ಹಲವು ಕ್ರಮಗಳು ಕೇವಲ ಕಾಗದಗಳಲ್ಲೇ ಉಳಿದುಬಿಟ್ಟಿದ್ದು, ನೆಲಮಟ್ಟದಲ್ಲಿ ಜಾರಿಗೆ ಬರದೇ ಇರುವುದನ್ನು ಪೀಠ ಸ್ಪಷ್ಟವಾಗಿ ಸೂಚಿಸಿದೆ.

ಹೀಗಾಗಿ ಹೊಸ ನಿಯಮಗಳನ್ನು ದೇಶವ್ಯಾಪಿಯಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

ಇನ್ನು ಹೈಕೋರ್ಟ್ ನೀಡಿರುವ ನಿರ್ದೇಶನಗಳ ಪ್ರಕಾರ, ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬೈಸಿಕಲ್‌ನ ಹಿಂಬದಿ ಸವಾರರಾಗಿ

ಸಾಗಿಸುವಾಗ ಹೆಲ್ಮೆಟ್ ಜೊತೆಗೆ ವಿಶೇಷ ಸುರಕ್ಷತಾ ಪರಿಕರಗಳನ್ನು ಬಳಸುವುದು ಕಡ್ಡಾಯ.

ಮೋಟಾರ್‌ಸೈಕಲ್ ವೇಗವೂ ಗಂಟೆಗೆ 40 ಕಿ.ಮೀ ಗಡಿ ಮೀರಬಾರದು. 9 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ

ನಿಯಮವನ್ನು ಜಾರಿಗೆ ತರಲೆಂದು ಸಲ್ಲಿಸಿದ್ದ ಅರ್ಜಿ ಹಿನ್ನಲೆಯಲ್ಲಿ ಸರ್ಕಾರದ ಕ್ರಮಗಳನ್ನು ಪರಿಶೀಲಿಸಿದ ಪೀಠ, ನಿಯಮಗಳ ಜಾರಿಗೆ ಅಗತ್ಯವಾದ

ಜಾಗೃತಿ ಕಾರ್ಯಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದೆ.

ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮಾರುಕಟ್ಟೆಯಲ್ಲಿ ಸುರಕ್ಷತಾ ಪರಿಕರಗಳ ಲಭ್ಯತೆಯನ್ನು ಖಚಿತಪಡಿಸಿಕೊಂಡ ಬಳಿಕ ರಾಜ್ಯದಲ್ಲಿ ಹೊಸ

ನಿಯಮವನ್ನು ಸಂಪೂರ್ಣ ಜಾರಿಗೊಳಿಸಲು 6 ತಿಂಗಳ ಅವಧಿ ನೀಡಲಾಗಿದೆ.

ಜೊತೆಗೆ ಜಾಗೃತಿ ಅಭಿಯಾನಗಳನ್ನು ನಿರಂತರವಾಗಿ ಮುಂದುವರಿಸಬೇಕೆಂದೂ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹೊಸ ಸುರಕ್ಷತಾ ಪರಿಕರಗಳ ಬಗ್ಗೆ ಸ್ಪಷ್ಟನೆ ನೀಡಿದರು.

ತಯಾರಕರು ಮಾರುಕಟ್ಟೆಗೆ ತರಲಿರುವ ನೂತನ ಹೆಲ್ಮೆಟ್‌ಗಳು ಹಾಗೂ ಸಾಧನಗಳು ಮಾರಾಟಕ್ಕೆ ಬರಬೇಕಾದರೆ ಮೊದಲು ತಾಂತ್ರಿಕ ಪರೀಕ್ಷೆಗಳು ಅಗತ್ಯ.

ಈ ಪರೀಕ್ಷೆಗಳು ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ನಡೆಯಬೇಕಿರುವುದರಿಂದ ಉತ್ಪಾದನೆ ಮತ್ತು ಮಾರುಕಟ್ಟೆ ಪ್ರವೇಶಕ್ಕೆ ಸಮಯ ಬೇಕಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಆದರೆ ಈ ಕಾರಣ ಸರ್ಕಾರಕ್ಕೆ ಮುಕ್ತಾಯ ಕಾರಣವಾಗುವುದಿಲ್ಲ ಎಂದು ಪೀಠ ಸೂಚಿಸಿದ್ದು, ಮಕ್ಕಳ ಸುರಕ್ಷತೆ ಕುರಿತು ನಿರ್ಲಕ್ಷ ಸಲ್ಲದು ಎಂಬ ಸಂದೇಶ ನೀಡಿದೆ.

ಇನ್ನು ಹೈಕೋರ್ಟ್ ಸರ್ಕಾರ ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂದು ಮತ್ತೆ ಒತ್ತಾಯಿಸಿದೆ.

ಹೊಸ ನಿಯಮಗಳ ಪ್ರಕಾರ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129ರ ಅಡಿ 2022ರ ಫೆಬ್ರವರಿ 15ರಂದು ಪ್ರಕಟಿಸಿದ್ದ ತಿದ್ದುಪಡಿ ಈಗ ದೇಶದ ವಿವಿಧ ರಾಜ್ಯಗಳಲ್ಲಿ ಅಳವಡಿಕೆಗೆ ಸಿದ್ಧವಾಗಿದೆ.

ಕರ್ನಾಟಕದಲ್ಲಿ ನಿಯಮಗಳ ಜಾರಿಗೆ ವಿಳಂಬವಾಗಿರುವುದನ್ನು ಗಮನಿಸಿದ ಹೈಕೋರ್ಟ್‌, ಮಕ್ಕಳಿಗಾಗಿ ಹೆಲ್ಮೆಟ್ ಕಡ್ಡಾಯಗೊಳಿಸುವ ಕ್ರಮವನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು ಎಂದು ಪುನಃ ಸ್ಪಷ್ಟ ಆದೇಶ ನೀಡಿದೆ.

ಬೆಂಗಳೂರಿನ ವಾಹನ ದಟ್ಟಣೆ, ಅಪಘಾತ ಪ್ರಮಾಣ, ಬಾಲಕರ ಸುರಕ್ಷತೆ ಇವುಗಳಿಂದ ಮಕ್ಕಳನ್ನು ರಕ್ಷಿಸಲು ಕೆಲ ಕ್ರಮಗಳು ಅನಿವಾರ್ಯವಾಗಿದೆ .

ಮಕ್ಕಳ ಪ್ರಾಣ ರಕ್ಷಣೆಗಾಗಿ ವಾಹನ ಚಾಲಕರು, ಪೋಷಕರು ಮತ್ತು ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದರೆ ಮಾತ್ರ ಈ ನಿಯಮಗಳು ನಿಜವಾದ ಅರ್ಥದಲ್ಲಿ ಫಲಕಾರಿ ಆಗಲಿವೆ ಎಂದು ಹೈಕೋರ್ಟ್ ತಿಳಿಸಿದೆ.

Tags: bengaluruGovernmenthelmetTwo Wheeler

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.