• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜ್ಯ ಸಭೆಯಲ್ಲಿ ಪ್ರಧಾನಮಂತ್ರಿ ಮೋದಿ ಮಾತಿನ ಸಾರಾಂಶ ಇಲ್ಲಿದೆ ನೋಡಿ…

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ರಾಜ್ಯ ಸಭೆಯಲ್ಲಿ ಪ್ರಧಾನಮಂತ್ರಿ ಮೋದಿ ಮಾತಿನ ಸಾರಾಂಶ ಇಲ್ಲಿದೆ ನೋಡಿ…
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 08: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನಿನ ಕುರಿತಂತೆ ಭುಗಿಲೆದ್ದಿರುವ ಪ್ರತಿಭಟನೆ ಕುರಿತು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿದೇಶಿ ವಿನಾಶಕಾರಿ ಸಿದ್ಧಾಂತದಿಂದ ನಾವು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೃಷಿ ಸುಧಾರಣೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದ ಪ್ರಧಾನಿ ಮೋದಿ, ಈ ಹಿಂದೆ ಯಾವ ಕಾಂಗ್ರೆಸ್ ಪಕ್ಷ ಕೃಷಿ ಸುಧಾರಣೆ ಜಾರಿಗೆ ತರಲು ಮುಂದಾಗಿತ್ತೋ.. ಅದೇ ಪಕ್ಷ ಇಂದು ತನ್ನದೇ ನಿಲುವಿನಿಂದ ಯೂಟರ್ನ್ ಹೊಡೆದಿದೆ. ದೇಶದಲ್ಲಿ ಹೊಸ ತಳಿಯ ಪ್ರತಿಭಟನಾಕಾರರು ಮತ್ತು ಚಳುವಳಿಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಎಚ್ಚರದಿಂದಿರಬೇಕು. ದೇಶದಲ್ಲಿ ಹೊಸ ಎಫ್‌ಡಿಐ (ವಿದೇಶಿ ವಿನಾಶಕಾರಿ ಐಡಿಯಾಲಜಿ) ಹೊರಹೊಮ್ಮಿದೆ ಮತ್ತು ಅಂತಹ ಸಿದ್ಧಾಂತದಿಂದ ದೇಶವನ್ನು ಉಳಿಸಲು ನಾವು ಹೆಚ್ಚು ಜಾಗೃತರಾಗಿರಬೇಕು ಎಂದು ಹೇಳಿದರು.

ರೈತನನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ 2014 ರಿಂದ ತಮ್ಮ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ಬದಲಾವಣೆಗಳನ್ನು ಪ್ರಾರಂಭಿಸಿದೆ. ಬೆಳೆ ವಿಮೆ ಯೋಜನೆಯನ್ನು ಹೆಚ್ಚು ರೈತ ಸ್ನೇಹಿಯನ್ನಾಗಿ ಮಾಡಲು ಬದಲಾಯಿಸಲಾಯಿತು. ಪಿಎಂ ಕಿಸಾನ್ ಸಮ್ಮನ್ ನಿಧಿ ಅವರ ಅಡಿಯಲ್ಲಿ ರೈತರ ಖಾತೆಗೆ 1.15 ಲಕ್ಷ ಕೋಟಿ ರೂ. ಪಾವತಿಸಲಾಗಿದೆ. ಬೆಳೆ ವಿಮೆಯಡಿ ತೆರವುಗೊಳಿಸಿದ 90,000 ಕೋಟಿ ರೂ. ಸಾಲಗಳು, 1 ಹೆಕ್ಟೇರ್‌ಗಿಂತ ಕಡಿಮೆ ಭೂಮಿಯನ್ನು ಹೊಂದಿರುವ ರೈತರ ಸಂಖ್ಯೆ ಶೇಕಡ 51 ರಿಂದ 68 ಕ್ಕೆ ಏರಿದೆ ಎಂದು ಹೇಳಿದರು.

‘ಸಿಖ್ಖರ ಕೊಡುಗೆಯ ಬಗ್ಗೆ ಭಾರತವು ತುಂಬಾ ಹೆಮ್ಮೆಪಡುತ್ತದೆ. ಅವರ ಬಗ್ಗೆ ಕೆಲವರು ಬಳಸುವ ಭಾಷೆ ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಕೆಲವರು ಸಿಖ್ಖರನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ಸಿಖ್ ಸಮುದಾಯ ರಾಷ್ಟ್ರಕ್ಕಾಗಿ ತುಂಬಾ ತ್ಯಾಗ ಮತ್ತು ಬಲಿದಾನ ಮಾಡಿದ ಸಮುದಾಯವಾಗಿದೆ. ಸಿಖ್ಖರ ಕೊಡುಗೆಯ ಬಗ್ಗೆ ದೇಶವು ಹೆಮ್ಮೆಪಡುತ್ತದೆ. ಆದರೆ ಕೆಲವರು ಅವರನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ಗುರು ಸಾಹಿಬ್‌ಗಳ ಮಾತುಗಳು ಮತ್ತು ಆಶೀರ್ವಾದಗಳು ಅಮೂಲ್ಯವಾದವು ಎಂದು ಹೇಳಿದರು.

ಹಿಂದೆಯೂ ಬೆಂಬಲ ಬೆಲೆ ಇತ್ತು, ಮುಂದೆಯೂ ಇರುತ್ತದೆ: ಹೋರಾಟ ಹಿಂಪಡೆಯಿರಿ:
ಇದೇ ವೇಳೆ ಬೆಂಬಲ ಬೆಲೆ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಹಿಂದೆಯೂ ಬೆಂಬಲ ಬೆಲೆ ಇತ್ತು, ಮುಂದೆಯೂ ಇರುತ್ತದೆ.. ಈ ಬಗ್ಗೆ ಸರ್ಕಾರದ ನಿಲುವಿನಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಹೇಳಿದರು. ‘ಹಾಲು ಉತ್ಪಾದನೆ ಯಾವುದೇ ಬಂಧನಕ್ಕೆ ಒಳಗಾಗಿಲ್ಲ. ಕೃಷಿ ಕ್ಷೇತ್ರದಲ್ಲಿ ಡೇರಿಗಳ ಪಾತ್ರ ಶೇ. 28ರಷ್ಟಿದೆ. ಹೊಸ ವಿಚಾರಗಳು ಬಂದಾಗ ಗೊಂದಲಗಳಾಗುವುದು ಸಹಜ. ರೈತರ ಜೊತೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ. ಹೋರಾಟ ಮಾಡುತ್ತಿರುವ ರೈತರ ಜೊತೆ ನಿರಂತರವಾಗಿ ಚರ್ಚೆ ಮಾಡುತ್ತಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಬಗ್ಗೆ ಗೊಂದಲ ಬೇಡ. ಈ ಹಿಂದೆಯೂ ಎಂಎಸ್ ಪಿ ಇತ್ತು, ಈಗಲೂ ಎಂಎಸ್ ಪಿ ಇದೆ ಮತ್ತು ಮುಂದೆಯೂ ಎಂಎಸ್ ಪಿ ಇರಲಿದೆ ಎಂದು ಹೇಳಿದರು.

ಅಂತೆಯೇ, ‘ದೇಶದ ರೈತರ ಕಷ್ಟಗಳನ್ನು ದೂರ ಮಾಡಬೇಕಿದೆ. ರೈತರ ಆದಾಯ ದ್ವಿಗುಣಗೊಳಿಸುವತ್ತ ಗಮನಹರಿಸಬೇಕಿದೆ. ಕಾಯ್ದೆಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸುತ್ತೇವೆ. ರೈತರು ಬಂದು ತಮ್ಮ ಸಮಸ್ಯೆ ಬಗ್ಗೆ ಮಾತುಕತೆ ನಡೆಸಲಿ. ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಿರಿ. ಪ್ರತಿಭಟನಾನಿರತ ವೃದ್ಧ ರೈತರು ಮನೆಗೆ ತೆರಳಬೇಕು. ರೈತರು ತಮ್ಮ ಹೋರಾಟ ಹಿಂಪಡೆಯಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಪ್ರತಿಭಟನೆಯ ಹೆಸರಿನಲ್ಲಿ ಪಂಜಾಬ್‌ ರೈತರ ದಾರಿ ತಪ್ಪಿಸುವ ಪ್ರಯತ್ನಗಳಾಗುತ್ತಿದೆ. ಕೆಲವರು ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕೆಲವರಿಗೆ ಹೋರಾಟವನ್ನು ಬಿಟ್ಟು ಬದುಕಲು ಆಗುವುದಿಲ್ಲ. ಆದರೆ, ನಾವು ದಾರಿ ತಪ್ಪಿಸುವ ಹೋರಾಟಗಾರರ ಬಗ್ಗೆ ಎಚ್ಚರವಾಗಿರಬೇಕು. ಆತ್ಮ ನಿರ್ಭರ್ ಭಾರತ್ ಕೇವಲ ಸರ್ಕಾರದಿಂದ ಸಾಧ್ಯವಾಗುವುದಿಲ್ಲ. ಇಡೀ ದೇಶದ ಜನರ ಸಹಕಾರ ಬೇಕು. ಹೊಸ ಎಫ್ ಡಿಐ ಅಂದರೆ ಫಾರಿನ್ ಡಿಸ್ಟ್ರಕ್ಟಿವ್ ಐಡಿಯಾಲಜಿ. ಈ ಹೊಸ ಎಫ್ ಡಿಐ ಬಗ್ಗೆ ಎಲ್ಲರೂ ಜಾಗರೂಕರಾಗಿರುವುದು ಅಗತ್ಯ ಎಂದು ಹೇಳಿದರು.

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.