Visit Channel

ದೆಹಲಿ ಸ್ಫೋಟದ ಬೆನ್ನಲ್ಲೆ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

delhi1

ದೆಹಲಿ, ಜ. 29: ರಾಜಧಾನಿ ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ  ಬ್ಲಾಸ್ಟ್‌ ಸಂಭವಿಸಿದೆ. ಕಡಿಮೆ ಪ್ರಮಾಣ ಐಇಡಿ ಸ್ಫೋಟಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಕನ್ನಡಿಗಳು ಮುರಿದು ಬಿದ್ದಿದೆ. ಯಾವುದೇ ಗಾಯಗಳು ವರದಿಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ರಾಷ್ಟ್ರಪತಿ ರಾಮನಾಥ್‌ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿರುವ ಸೇನೆಯ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯುತ್ತಿರುವ ವಿಜಯ್‌ ಚೌಕ್‌ನಿಂದ 1.8 ಕಿ.ಮೀ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ; 4-5 ವಾಹನ ಡ್ಯಾಮೇಜ್ ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ, ಪ್ರಮುಖ ತಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದೆಹಲಿ ಸುತ್ತಮುತ್ತ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲಾಗಿದೆ. ಪ್ರತಿ ವಾಹನಗಳ ತಪಾಸನೆ ನಡೆಯುತ್ತಿದೆ. ಎಲ್ಲಾ ರಾಜ್ಯ ಹಾಗೂ ನಗರಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚಿಸಲಾಗಿದೆ. ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲ್ ಕಚೇರಿ ಕಟ್ಟದ ಬಳಿ ಬಾಂಬ್ ಸ್ಫೋಟಗೊಂಡಿದೆ.

ಸ್ಥಳಕ್ಕೆ ರಾಷ್ಟ್ರೀಯ ಭದ್ರತಾ ದಳ(ಎನ್‌ಎಸ್‌ಜಿ) ಆಗಮಿಸಿದೆ. ಸ್ಫೋಟದಿಂದ ಮೂರು ಕಾರುಗಳಿಗೆ ಹಾನಿಯಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.