Bengaluru: ದಿನದಿಂದ ದಿನಕ್ಕೆ ರಾಜ್ಯ ಬಿಜೆಪಿಯಲ್ಲಿ ಹೆಚ್ಚಾಗುತ್ತಿರುವ ಆಂತರಿಕ ಕಚ್ಚಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ (High Command) ಮುಂದಾಗಿದೆ, ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BJP State President BY Vijayendra) ಅವರು ದೆಹಲಿಗೆ ಭೇಟ ನೀಡಿದ್ದು, ಶೀಘ್ರದಲ್ಲೇ ಅಮಿತ್ ಶಾ (Amit Shah) ಅವರು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.ವಿಧಾನಸಭಾ ಚುನಾವಣೆಯ (Assembly elections) ಫಲಿತಾಂಶದ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರ ಮತ್ತು ಮಣಿಪುರದಲ್ಲಿ ಸಿಎಂ ಎನ್. ಬಿರೇನ್ ಸಿಂಗ್ (Manipur CM N. Biren Singh) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಕಾರ್ಯನಿರತರಾಗಿದ್ದು, ಬಿಡುವಾದ ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿ, ನಂತರವೇ ವಾಪಸ್ಸಾಗಲಿದ್ದಾರೆಂದು ವರದಿಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷರ (BJP State President) ನೇಮಕ ವಿಚಾರವಾಗಿ ವರಿಷ್ಠರು ನಿರ್ಧಾರ ಕೈಗೊಳ್ಳಲು ಮುಂದಾಗಿರುವ ಹಿನ್ನೆಲೆಯಲ್ಲಿ ಶಾ ಅವರೊಂದಿಗಿನ ವಿಜಯೇಂದ್ರ ಭೇಟಿ ನಿರ್ಣಾಯಕವಾಗಿದೆ. ಈ ಮಧ್ಯೆ ಸೋಮಣ್ಣ ಮನೆ ಪೂಜೆ ನೆಪದಲ್ಲಿ ಬಂಡಾಯ ನಾಯಕರೂ ಕೂಡ ದೆಹಲಿ (Delhi) ಸೇರಿದ್ದಾರೆ. ಸೋಮಣ್ಣ ಮನೆ ಪೂಜೆಗೆ ಹೋಗುತ್ತಿದ್ದೇವೆ ಎಂದು ಎರಡೂ ಬಣದ ನಾಯಕರು ಹೇಳಿದ್ದು, ಅತ್ತ ನಾನು ಯಾರನ್ನೂ ಕರೆದಿಲ್ಲ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಪಕ್ಷದ ಹೈಕಮಾಂಡ್ ನಾಯಕರು (Party high command leaders) ತಮಗೆ ಅವಕಾಶ ನೀಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರುವ ಮಾಜಿ ಸಚಿವ ಬಿ. ಶ್ರೀರಾಮುಲು (Former Minister B. Sriramulu) ಅವರು, ಪ್ರಯಾಗ್‌ರಾಜ್‌ನಲ್ಲಿ ಪವಿತ್ರ ಸ್ನಾನ ಮಾಡಿ ತವರಿಗೆ ವಾಪಸ್ಸಾಗಿದ್ದಾರೆ.ಚುನಾವಣೆಗೆ ಉಳಿದಿರುವ ಕೊನೆಯ ಐದು ದಿನಗಳಲ್ಲಿ ಶ್ರೀರಾಮುಲು (Sriramulu) ಪ್ರಚಾರಕ್ಕೆ ಗೈರುಹಾಜರಾಗಿದ್ದಾರೆ ಎಂದು ಹೇಳಲಾಗಿತ್ತು.ಈ ವಿಷಯದ ಬಗ್ಗೆ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ (Radha Mohan Das Agarwal) ಅವರು ಶ್ರೀರಾಮುಲು ಅವರನ್ನು ಪ್ರಶ್ನಿಸಿದ್ದರು, ಇದರಿಂದ ಅಸಮಾಧಾನಗೊಂಡಿದ್ದ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆಂಬ ಮಾತುಗಳು ಕೂಡಾ ಕೇಳಿ ಬರ್ತಿದೆ.