Visit Channel

ಚಾಮರಾಜನಗರ ಘಟನೆ ಬಗ್ಗೆ ಹೈಕೋರ್ಟ್ ಆಕ್ರೋಶ: ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಸಲಹೆ

768-512-11637189-thumbnail-3x2-sanju

ಚಾಮರಾಜನಗರ, ಮೇ. 05: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿ ಮೃತಪಟ್ಟ ಘಟನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಬಗ್ಗೆ ನ್ಯಾಯಾಂಗ ತನಿಖೆಗೆ ಸಲಹೆ ನೀಡಿದೆ.

ಸ್ವಯಂ ಪ್ರೇರಿತ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್, ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರದ ಮೀನಮೇಷ ಎಣಿಸುತ್ತಿರುವ ಬಗ್ಗೆ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ, ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸುವವರೆಗೂ ನಾವು ಕಾಯಬೇಕಾ ಎಂದು ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿದೆ.

ಕರ್ನಾಟಕದ ಪಾಲಿನ ಆಕ್ಸಿಜನ್ ಕೋಟಾ ಹೆಚ್ಚಿಸುತ್ತಿರೋ ಇಲ್ಲವೋ? ಕಡಿಮೆ ಆಕ್ಸಿಜನ್ ಬಳಕೆ ಇರುವ ಕಡೆ ಹೆಚ್ಚು ಕೊಡುತ್ತಿದ್ದೀರಿ, ಇನ್ನು ಎಷ್ಟು ಮಂದಿ ಆಕ್ಸಿಜನ್ ಇಲ್ಲದೆ ಸಾಯಬೇಕು ಎಂದು ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕಕ್ಕೆ ಆಕ್ಸಿಜನ್ ಕೋಟಾ ಹೆಚ್ಚಿಸುವ ಸಂಬಂಧ ನಾಳೆ ಬೆಳಿಗ್ಗೆ 10.30ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಕೇಂಧ್ರ ಸರ್ಕಾರಕ್ಕೆ ಹೈಕೋರ್ಟ್ ಸಿಜೆ ಎ.ಎಸ್ ಓಕಾ ಮತ್ತು ನ್ಯಾ. ಅರವಿಂದಕುಮಾರ್ ಪೀಠ ಗಡುವು ನೀಡಿದೆ. ಇಲ್ಲದಿದ್ದರೇ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವುದಾಗಿ ಎಚ್ಚರಿಕೆ ನೀಡಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿಗಳು ಮೃತಪಟ್ಟ ಘಟನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಅಗತ್ಯವಿದೆ.  ಹೀಗಾಗಿ ನ್ಯಾಯಾಂಗ ತನಿಖೆ ಬಗ್ಗೆ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸಿಜೆ ಎ.ಎಸ್ ಓಕಾ ಮತ್ತು ನ್ಯಾ. ಅರವಿಂದ ಕುಮಾರ್ ಪೀಠ ಸೂಚನೆ ನೀಡಿದೆ.

ಚಾಮರಾಜನಗರಕ್ಕೆ ಆಮ್ಲಜನಕ ಪೂರೈಕೆಯಾಗದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ 24 ಮಂದಿ ಸಾವಿಗೀಡಾದರು. ಇದರಿಂದ ಸರ್ಕಾರದ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ದುರಂತ ನಡೆದ ದಿನ ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ಎಲ್ಲರೂ ಆಮ್ಲಜನಕ ಕೊರತೆಯಿಂದ ಮೃತಪಟ್ಟಿಲ್ಲ. ಮೂವರು ಮಾತ್ರ ಆಕ್ಸಿಜನ್‌ ಸಿಗದೇ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.