5 ಹಾಗೂ 8ನೇ ತರಗತಿ ಬೋರ್ಡ್‌ ಪರೀಕ್ಷೆ: ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್

Bengaluru : ಮಕ್ಕಳು ಪಡೆಯುವ ಅಂಕಗಳ ಆಧಾರದಲ್ಲಿ ಅವರ ಬುದ್ದಿವಂತಿಕೆ ಅಳೆಯಲು ಸಾಧ್ಯವೇ..? ಎಂದು ಹೈಕೋರ್ಟ್‌(High Court) ರಾಜ್ಯ ಸರ್ಕಾರಕ್ಕೆ ಚಾಟಿ (high court question govt) ಬೀಸಿದೆ.

5 ಮತ್ತು 8ನೆ ತರಗತಿಗಳ ಮೌಲ್ಯಮಾಪನ ವಿಧಾನ ಬದಲಾಯಿಸಿ, ಬೋರ್ಡ್ (Board) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ, ಕರ್ನಾಟಕ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ, ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ,

ಮಾನ್ಯತೆ ಪಡೆದ ಅನುದಾನ ರಹಿತ ಶಿಕ್ಷಣಗಳ ಸಂಘಗಳು ಹೈಕೋರ್ಟಗೆ ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, ಮಕ್ಕಳು ಪಡೆಯುವ ಅಂಕಗಳ ಆಧಾರದಲ್ಲಿ ಅವರ ಬುದ್ದಿವಂತಿಕೆ ಅಳೆಯಲು ಸಾಧ್ಯವೇ..?ಎಂದು ಸರಕಾರವನ್ನು ಪ್ರಶ್ನೆ ಮಾಡಿತು.

ಕೋವಿಡ್-೧೯ (Covid-19) ಸಾಂಕ್ರಾಮಿಕ ಸಂದರ್ಭದಲ್ಲಿ ಮಕ್ಕಳಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿದಿದೆ. ಇದನ್ನು ಅಭಿವೃದ್ದಿ ಪಡಿಸಲು 5 ಮತ್ತ 8ನೆ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗುತ್ತಿದೆ.

ಈ ಬೋರ್ಡ್‌ ಪರೀಕ್ಷೆಯಲ್ಲಿ ಮಕ್ಕಳು ಉತ್ತೀರ್ಣರಾಗದಿದ್ದರೂ ಅವರನ್ನು ಅದೇ ತರಗತಿಯಲ್ಲಿ ಮುಂದುವರೆಸುವುದಿಲ್ಲ. ಅವರಿಗೆ ಮುಂದಿನ ತರಗತಿಗೆ ಪ್ರವೇಶ ನೀಡಲಾಗುತ್ತದೆ.

ಮಕ್ಕಳಲ್ಲಿನ ಬುದ್ಧಿವಂತಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಮಾತ್ರ ಈ ಬೋರ್ಡ್‌ ಪರೀಕ್ಷೆಯ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ರಾಜ್ಯ ಸರಕಾರದ ಪರ ವಕೀಲರು ವಾದಿಸಿದರು.

ಇನ್ನು ಕರ್ನಾಟಕ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ, ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ,

ಮಾನ್ಯತೆ ಪಡೆದ ಅನುದಾನ ರಹಿತ ಶಿಕ್ಷಣಗಳ ಸಂಘಗಳ ಪರವಾಗಿ ವಾದ ಮಂಡಸಿದ ವಕೀಲರು, ರಾಜ್ಯ ಸರಕಾರ 5 ಮತ್ತು 8ನೆ ತರಗತಿಗಳ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಯನ್ನು ಜಾರಿ ಮಾಡಿದ್ದು,

ಇದರಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಜೊತೆಗೆ ಮಕ್ಕಳ ಕಲಿಕೆಯ ಮೇಲೆಯೂ ಪರಿಣಾಮ ಬೀರಲಿದೆ.

ಹೀಗಾಗಿ ಶಿಕ್ಷಣ ಸಂಸ್ಥೆಗಳು ಮತ್ತು ಮಕ್ಕಳ ಹಿತದೃಷ್ಟಿಯಿಂದ ರಾಜ್ಯ ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ನ್ಯಾಯಾಲಯ ರದ್ದು ಪಡಿಸಬೇಕು ಎಂದು ಪೀಠಕ್ಕೆ (high court question govt) ಮನವಿ ಮಾಡಿದ್ದರು. ವಕೀಲರ ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠವು ಅಂತಿಮ ಆದೇಶವನ್ನು ಕಾಯ್ದಿರಿಸಿ ವಿಚಾರಣೆ ಮುಂದೂಡಿದೆ.

Exit mobile version