ಕೆಆರ್‌ಎಸ್‌ ಸುತ್ತ ಗಣಿಗಾರಿಕೆಗೆ ಹೈಕೋರ್ಟ್‌ ಸಮ್ಮತಿ

 ಬೆಂಗಳೂರುಸೆ.17 : ಮಂಡ್ಯ ಜಿಲ್ಲಾಧಿಕಾರಿ ಮಂಡ್ಯ ಜಿಲ್ಲೆಯ  ಸುತ್ತಮುತ್ತಲಿನ 28 ಕಲ್ಲುಗಣಿಗಾರಿಕೆ ಘಟಕಗಳ ಪರವಾನಗಿ ರದ್ದುಗೊಳಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಮಂಡ್ಯ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಮೆರ್ಸೆಸ್‌ ಶ್ರೀ ಲಕ್ಷ್ಮೀವೆಂಕಟೇಶ್ವರ ಕಲ್ಲು ಗಣಿಗಾರಿಕೆ ಘಟಕ ಸೇರಿದಂತೆ ಸುಮಾರು 28 ಕಲ್ಲು ಗಣಿಗಾರಿಕೆ ಕಂಪನಿ ಹಾಗೂ ಅವುಗಳ ಮಾಲೀಕರು ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿಗಳನ್ನು ಪುರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ ಅವರ ನೇತೃತ್ವದ ವಿಭಾಗೀಯ ಪೀಠ ಮಂಡ್ಯ ಜಿಲ್ಲಾಧಿಕಾರಿ ರದ್ದುಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.

 ಜಿಲ್ಲಾಧಿಕಾರಿ ಕಲ್ಲು ಗಣಿಗಾರಿಕೆ ಘಟಕಗಳಿಗೆ ನೀಡಲಾಗಿದ್ದ ಪರವಾನಗಿಯನ್ನು ರದ್ದಪಡಿಸುವ ಮುನ್ನ ಕಲ್ಲು ಗಣಿಗಾರಿಕೆಯ ಘಟಕಗಳ ಮಾಲೀಕರ ಅಹವಾಲು ಆಲಿಸಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯ ಆದೇಶ ರದ್ದುಪಡಿಸಲಾಗುತ್ತಿದೆ. ಆದರೆ, ಮತ್ತೆ ಕಲ್ಲು ಗಣಿಗಾರಿಕೆ ಘಟಕಗಳ ಮಾಲೀಕರಿಗೆ ಜಿಲ್ಲಾಧಿಕಾರಿ ಮತ್ತೆ ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಬೇಕು. ಘಟಕಗಳ ಮಾಲೀಕರ ಅಹವಾಲು ಆಲಿಸಿದ ನಂತರ ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳಬಹುದು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಗಣಿಗಾರಿಕೆ ಕಂಪನಿಗಳು ನಿಟ್ಟುಸಿರು ಬಿಟ್ಟಂತಾಗಿದೆ

Exit mobile version