ಹಿಜಾಬ್ ತೀರ್ಪು ಕೊಟ್ಟ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ; ಆರೋಪಿ ಅರೆಸ್ಟ್!

rithuraj awasthi

ಹಿಜಾಬ್(Hijab) ವಿವಾದದ(Controversy) ಕುರಿತು ತೀರ್ಪು(Verdict) ನೀಡಿರುವ ಹೈಕೋಟ್‍ನ(Highcourt) ಮುಖ್ಯನ್ಯಾಯಮೂರ್ತಿ(Judge) ರಿತುರಾಜ್ ಅವಸ್ತಿ(Rithuraj Awasthi) ಸೇರಿದಂತೆ ಇತರ ಇಬ್ಬರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಲಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಮಿಳುನಾಡು(Tamilnadu) ಮೂಲದ ತೌಹೀದ್ ಜಮಾತ್ ಎಂಬ ಮುಸ್ಲಿಂ ಸಂಘಟನೆಯ ಮುಖಂಡ ಆರ್. ರೆಹ್ಮತ್‍ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಿಜಾಬ್ ತೀರ್ಪಿನ ವಿರುದ್ದ ಮಾತನಾಡುತ್ತಾ, ಪರೋಕ್ಷವಾಗಿ ಮೂವರು ನ್ಯಾಯಾಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದಾನೆ. ಆರ್. ರೆಹ್ಮತ್‍ವುಲ್ಲಾ, ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ, ವಕೀಲೆ ಸುಧಾ ಕಟ್ಟ ಎಂಬುವವರು ವಿಧಾನಸೌಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ದೂರು ದಾಖಲಿಸಿಕೊಂಡಿರುವ ಪೋಲಿಸರು, ಐಪಿಸಿ ಸೆಕ್ಷನ್ 506(ಬೆದರಿಕೆ) 504(ಶಾಂತಿ ಭಂಗ) 505 (ಸಾರ್ವಜನಿಕ ಕಿಡಿಗೇಡಿತನ) 501(1) (ಮಾನಹಾನಿ) ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಇನ್ನು ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಗಿರೀಶ್ ಭಾರದ್ವಾಜ್ ಎಂಬುವವರು ಪತ್ರ ಬರೆದಿದ್ದಾರೆ. ಅದೇ ರೀತಿ ಹೊಸಪೇಟೆಯಲ್ಲಿ ಅಮೀರ್-ಈ-ಶರೀತ್ ಎಂಬ ಸಂಘಟನೆ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಗೋಡೆ ಬರಹಗಳನ್ನು ಬರೆದಿದೆ.

ಇದು ನೆರವಾಗಿ ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ಹೈಕೋರ್ಟ್ ಸ್ವಯಂ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ. ಇನ್ನು ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೋಲಿಸ್ ಇಲಾಖೆ, ತಮಿಳುನಾಡು ಪೋಲಿಸರೊಂದಿಗೆ ಸಂಪರ್ಕದಲ್ಲಿದ್ದು, ಆರೋಪಿ ಆರ್. ರೆಹ್ಮತ್‍ವುಲ್ಲಾನನ್ನು ಬಂಧಿಸಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಇನ್ನು ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಅಂತಿಮ ತೀರ್ಪು ನೀಡಿತ್ತು. ಈ ತೀರ್ಪನ್ನು ಕೆಲ ಮುಸ್ಲಿಂ ಸಂಘಟನೆಗಳು ವಿರೋಧಿಸಿದ್ದು, ಈ ತೀರ್ಪನ್ನು ನಾವು ಒಪ್ಪುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದವು. ಇನ್ನು ಕೆಲ ಸಂಘಟನೆಗಳು ಕರ್ನಾಟಕದಲ್ಲಿ ಬಂದ್‍ಗೆ ಕರೆ ನೀಡಿದ್ದವು. ಇನ್ನು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪೋಲಿಸರು ಆರ್. ರೆಹ್ಮತ್‍ವುಲ್ಲಾ ಸೇರಿದಂತೆ ಆತನ ಸಹಚರರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ, ಆರೋಪಿಗಳನ್ನು ಪೋಲಿಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Exit mobile version