ಹೈಕೋರ್ಟ್ ನಿಯಮ ಪಾಲಿಸದ ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್!


ಶಿವಮೊಗ್ಗ ಫೆ.19 : ಹಿಜಾಬ್ ವಿವಾದ ಇಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಆದರೂ ಕೂಡ ಹೈಕೋರ್ಟ್ ತೀರ್ಪಿಗೆ ವಿದ್ಯಾರ್ಥಿನಿಯರು ಬೆಲೆ ಕೊಡದ ಹಿನ್ನೆಲೆಯಲ್ಲಿ, ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.

ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.
ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.


ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.