Visit Channel

ಹಿರಿಯ ಕಾಂಗ್ರೆಸ್‌ ಮುಖಂಡ ಮೋತಿಲಾಲ್ ವೋರಾ ವಿಧಿವಶ

Motilal-vora

ನವದೆಹಲಿ, ಡಿ. 21: ಹಿರಿಯ ಕಾಂಗ್ರೆಸಿಗ ಮೋತಿಲಾಲ್ ವೋರಾ ಇಂದು ವಿಧಿವಶರಾಗಿದ್ದಾರೆ. ಬಹಳ ದಿನಗಳಿಂದ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಹಾಗೂ ಬೇಗನೆ ಸೋಂಕಿನಿಂದ ಸಹ ಗುಣಮುಖರಾಗಿದ್ದರು. ಆದರೆ ಭಾನುವಾರ ರಾತ್ರಿ ಅವರ ಆರೋಗ್ಯ ಪರಿಸ್ಥಿತಿ ಬಹಳ ಹದಗೆಟ್ಟಿದ್ದ ಕಾರಣ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಮೋತಿಲಾಲ್ ವೋರಾರವರು ವಿಧಿ ಆಟ ನೋಡಿ ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಆದರೆ ಅದೇ ದಿನ ಕೊನೆಯುಸಿರು ಎಳೆದಿದ್ದಾರೆ. ರಾಹುಲ್ ಗಾಂಧಿ ಸೇರಿ ಅನೇಕ ಗಣ್ಯರು ಟ್ವೀಟ್ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.

1927ರ ಡಿಸೆಂಬರ್ 20ರಂದು ಬ್ರಿಟಿಷ್ ಇಂಡಿಯಾದ ಜೋಧ್‌ಪುರ ರಾಜ್ಯದ ನಿಂಬಿ ಜೋಧಾ ಎಂಬಲ್ಲಿ ಪುಷ್ಕರಣ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ರಾಯ್‍ಪುರ ಮತ್ತು ಕೋಲ್ಕತದಲ್ಲಿ ಶಿಕ್ಷಣ ಪಡೆದ ಇವರು, ಬಹಳ ವರ್ಷಗಳ ಕಾಲ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಹಾಗೂ ಇವರ ಮಗ ಅರುಣ್ ವೋರಾರವರು ಮೂರನೇ ಬಾರಿ ಶಾಸಕರಾಗಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.