Visit Channel

ಹಿಜಾಬ್ ಪ್ರಕರಣದ ಹಿಂದಿರುವ `ಕಾಣದ ಕೈ’ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ!

hijaab

ರಾಜ್ಯಾದ್ಯಲ್ಲಿ ನಡೆಯುತ್ತಿರುವ ಹಿಜಾಬ್‌ ವಿವಾದ ಇದೀಗ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಇತ್ತ ರಾಜಕೀಯ ಪಕ್ಷಗಳು ಪರಸ್ಪರ ಕೆಸರಾಟದಲ್ಲಿ ತೊಡಿಗಿವೆ. ಇದಕ್ಕೆಲ್ಲಾ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಬಿಜೆಪಿ ಆರೋಪಿಸಿ ಟ್ವೀಟ್‌ ಮಾಡಿದೆ.
ಸದ್ಯ ದೇಶದಾದ್ಯಂತ ಚರ್ಚೆಗೆ ಒಳಗಾಗುತ್ತಿರುವ ಹಿಜಾಬ್ ವಿವಾದವು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯ ರಾಜ್ಯ ಘಟಕವು ಹಿಜಾಬ್ ವಿವಾದ ಕುರಿತಂತೆ ಟ್ವೀಟ್ ಮಾಡಿ, ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂದು ಆರೋಪಿಸಿದೆ.


ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ? ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ ಸಿದ್ದರಾಮಯ್ಯ ಅವರು ಹಿಜಾಬ್ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಟ್ವೀಟ್ ಮಾಡಿದೆ. ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ. ಹಿಜಾಬ್ ಪ್ರಕರಣದ ಹಿಂದಿರುವ “ಕಾಣದ ಕೈ”ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ ಎಂದು ಮಗದೊಂದು ಟ್ವೀಟ್ ನಲ್ಲಿ ಹೇಳಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.