Visit Channel

ಹಿಜಾಬ್‌, ಕೇಸರಿ ಯಾವುದಕ್ಕೂ ಅವಕಾಶ ಇಲ್ಲ -ಬಿ.ಸಿ. ನಾಗೇಶ್

b c nagesh

ಹಿಜಾಬ್‌ ವಿವಾದ ಮತ್ತಷ್ಟು ಕಠಿಣವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಪ್ರತಿಕ್ರಿಯಿಸಿದ್ದು, ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಕೇಸರಿ ಶಾಲು, ಹಸಿರು ಶಾಲು ಯಾವುದನ್ನೂ ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶ ಇಲ್ಲ ಎಂದು ಹಿಜಾಬ್ ವಿವಾದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್,  ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ದ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು. ಶಾಲಾ ಆವರಣದ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ.  ಅದರೆ ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೋಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು.ಹೆಣ್ಣುಮಕ್ಕಳ ಮುಗ್ದತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕಪಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು. ನಾಳೆಯ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಬಿಸಿ ನಾಗೇಶ್ ತಿಳಿಸಿದರು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.