ಹಿಜಾಬ್(Hijab) ಪ್ರಕರಣದ ಕುರಿತು ಕರ್ನಾಟಕ(Karntaka) ರಾಜ್ಯ(State) ಹೈಕೋರ್ಟ್‍ನ(Highcourt) ತ್ರಿಸದಸ್ಯರ ನೇತೃತ್ವದ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನ ವಿರುದ್ದ ಕೆಲ ಮುಸ್ಲಿಂ(Muslim) ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ದೇಶದ ನ್ಯಾಯಾಂಗದ ವಿರುದ್ದವೇ ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದ್ದು, ಈ ಕೃತ್ಯಗಳನ್ನು ನಡೆಯಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ(Araga Jnanendra) ಹೇಳಿದ್ದಾರೆ.

ಕಾನೂನಿನ ಪ್ರಕಾರ, ತೀರ್ಪಿನ ವಿರುದ್ದ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲು ಎಲ್ಲರಿಗೂ ಅವಕಾಶವಿದೆ. ಆದರೆ ತೀರ್ಪಿನ ವಿರುದ್ದ ಬೀದಿಗಿಳಿದು ಪ್ರತಿಭಟಿಸುವ ಹಕ್ಕು ಯಾರಿಗೂ ಇಲ್ಲ. ನಮ್ಮ ಸಂವಿಧಾನ ನ್ಯಾಯಾಂಗಕ್ಕೆ ಸಾಕಷ್ಟು ಮಹತ್ವ ಮತ್ತು ಜವಾಬ್ದಾರಿಯನ್ನು ನೀಡಿದೆ. ನ್ಯಾಯಾಂಗದ ವಿರುದ್ದ ಬೀದಿಗಿಳಿದರೆ ಅಂತವರ ವಿರುದ್ದ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇನ್ನು ಈ ದೇಶದ ಕಾನೂನಿಗೆ ಗೌರವ ಕೊಡದವರು, ಸಂವಿಧಾನವನ್ನು ಒಪ್ಪದವರು ಈ ದೇಶದ ನಾಗರಿಕರಾಗಿ ಏನು ಅರ್ಥ ಎಂದು ಅವರೇ ಉತ್ತರ ಕೊಡಬೇಕು. ನ್ಯಾಯಾಂಗದ ಮೇಲೆ ನಂಬಿಕೆ ಇಲ್ಲದಿದ್ದರೆ ಹೇಗೆ? ಎಂದು ಗೃಹ ಸಚಿವರು ಪ್ರಶ್ನಿಸಿದರು.
ಇನ್ನು ಹಿಜಾಬ್ ಹೋರಾಟದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಈ ಕುರಿತು ರಾಜ್ಯ ಹೈಕೋರ್ಟ್ ಕೂಡಾ ಸಂಶಯ ವ್ಯಕ್ತಪಡಿಸಿದೆ. ಈ ಬಗ್ಗೆ ತನಿಖೆ ನಡೆಸುವಂತೆಯೂ ಹೇಳಿದೆ. ಹೀಗಾಗಿ ಹಿಜಾಬ್ ಹಿಂದಿರುವ ಕಾಣದ ಕೈಗಳ ಬಗ್ಗೆ ನಾವು ಸೂಕ್ತ ತನಿಖೆ ನಡೆಸುತ್ತಿದ್ದೇವೆ. ಪ್ರತಿಭಟನೆಯ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲ ಪೋಲಿಸ್ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದೇವೆ. ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದ್ದೇವೆ ಎಂದರು.

ಇನ್ನು ಹಿಜಾಬ್ ಅನ್ನು ಶಾಲಾ ಕಾಲೇಜಿನಲ್ಲಿ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಸಿಎಫ್‍ಐ ಸೇರಿದಂತೆ ಅನೇಕ ಮುಸ್ಲಿಂ ಸಂಘಟನೆಗಳು ಹೈಕೋರ್ಟ್ ನೀಡಿರುವ ತೀರ್ಪನ್ನೇ ಧಿಕ್ಕರಿಸುವ ಮಾತನಾಡುತ್ತಿದ್ದಾರೆ. ಇನ್ನು ಉಡುಪಿಯ ಆರು ಜನ ವಿದ್ಯಾರ್ಥಿನಿಯರು ನಾವು ಕೋರ್ಟ್ ನೀಡಿರುವ ತೀರ್ಪನ್ನು ಒಪ್ಪುವುದಿಲ್ಲ, ನಮಗೆ ನಮ್ಮ ಕುರಾನ್ ಹೇಳಿದ್ದೆ ಮುಖ್ಯ. ರಾಜ್ಯ ಸರ್ಕಾರದ ಒತ್ತಡದಿಂದ ಹೈಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ.