ದಲಿತ ಯುವಕನಿಗೆ ಮೂತ್ರ ಕುಡಿಸಿ ಆರೋಪಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು ಸೆ 1 : ದಲಿತ ಯುವಕನಿಗೆ ಮೂತ್ರ ಕುಡಿಸಿ ಆರೋಪದಡಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಅರ್ಜುನ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕಿರಗುಂದ ಗ್ರಾಮದ ಮಹಿಳೆಯೊಬ್ಬಳು ಕಾಣೆಯಾಗಿರುವ ಪ್ರಕರಣ ಸಂಬಂಧ ಸಬ್ ಇನ್ಸಪೆಕ್ಟರ್ ಅರ್ಜುನ್, ದಲಿತ ಯುವಕ ಪುನೀತ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಪುನೀತ್ ನೀರು ಕೇಳಿದಾಗ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ್ದರು  ಎಂದು ಪುನೀತ್ ಅರ್ಜುನ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದರು. ವಿಚಾರಣೆ ಬಳಿಕ ಪಿಎಸ್ಐ ವಿರುದ್ದ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲಾಗಿತ್ತು. ಮೂತ್ರ ಕುಡಿಸಿದ ಆರೋಪದಡಿ ಪಿ.ಎಸ್.ಐ. ಅರ್ಜುನ್ ಮೇಲೂ ಕೇಸ್ ದಾಖಲಾಗಿತ್ತು. ಸರ್ಕಾರ ಪ್ರಕರಣದ ತನಿಖೆಯನ್ನ ಸಿಐಡಿ ಹೆಗಲಿಗೆ ಹಾಕಿತ್ತು. ಸೆ 1ರಂದು ಬೆಂಗಳೂರಿನಲ್ಲಿ ಪಿಎಸ್‍ಐ. ಅರ್ಜುನ್ ಅವರನ್ನು ಬಂಧಿಸಿದ ಸಿ.ಐ.ಡಿ. ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಅವರು ಆರೋಪಿ ಅರ್ಜುನ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡೆಸಲು ಆದೇಶಿಸಿದ್ದಾರೆ.

Latest News

ದೇಶ-ವಿದೇಶ

‘ಹರ್ ಘರ್ ತಿರಂಗ’; 10 ದಿನಗಳಲ್ಲಿ 1 ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ!

10 ದಿನಗಳ ಅಲ್ಪಾವಧಿಯಲ್ಲಿ, ಭಾರತ ಅಂಚೆ ಇಲಾಖೆ 1 ಕೋಟಿಗೂ ಹೆಚ್ಚು ರಾಷ್ಟ್ರೀಯ ಧ್ವಜಗಳನ್ನು ಮಾರಾಟ ಮಾಡಿದೆ. ಈ ಧ್ವಜಗಳು, ಅಂಚೆ ಕಚೇರಿಗಳು ಮತ್ತು ಆನ್ಲೈನ್ ಮೂಲಕ ನಾಗರಿಕರಿಗೆ ತಲುಪಿವೆ.

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.