Shimla : ಹಿಮಾಚಲ ಪ್ರದೇಶ(Himachal Pradesh Politics) ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಹಲವು ಕಾಂಗ್ರೆಸ್ ನಾಯಕರು ಇಂದು ಭಾರತೀಯ ಜನತಾ ಪಕ್ಷಕ್ಕೆ(BJP) ಸೇರ್ಪಡೆಗೊಂಡಿದ್ದಾರೆ.

ಒಟ್ಟು 26 ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷವನ್ನು(Himachal Pradesh Politics) ತೊರೆದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮತದಾನಕ್ಕೆ ಇನ್ನೂ ಒಂದು ವಾರ ಬಾಕಿ ಇರುವಾಗ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ ತಂದಿದೆ.
ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುಧನ್ ಸಿಂಗ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬೆಂಬಲ ನೀಡಿದ್ದಾರೆ.
ಇನ್ನು ಬಿಜೆಪಿಯೊಂದಿಗೆ ಕೈಜೋಡಿಸಿರುವವರಲ್ಲಿ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ,
ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹರ್ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸಮಾಜ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಸೇರಿದ್ದಾರೆ.
ಇದನ್ನೂ ಓದಿ : https://vijayatimes.com/aimim-requests-to-celebrate/
ಠಾಕೂರ್, ನರೇಶ್ ವರ್ಮಾ, ಚಮ್ಯಾನ ವಾರ್ಡ್ ಸದಸ್ಯ ಯೋಗೇಂದ್ರ ಸಿಂಗ್, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಶಿಮ್ಲಾ ಅಧ್ಯಕ್ಷ ಧರ್ಮೇಂದ್ರ ಕುಮಾರ್,
ವೀರೇಂದ್ರ ಶರ್ಮಾ, ರಾಹುಲ್ ರಾವತ್, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ್ ಠಾಕೂರ್ ಬಿಜೆಪಿ ಸೇರಿದ ಪ್ರಮುಖ ನಾಯಕರು.

ಚಮನ್ ಲಾಲ್ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಗಳಾದ ದೇವೇಂದ್ರ ಸಿಂಗ್, ಮಹೇಂದ್ರ ಸಿಂಗ್, ಯುವ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ,
ಮುನೀಶ್ ಮಂಡ್ಲಾ, ಬಾಲಕೃಷ್ಣ ಬಾಬಿ, ಸುನೀಲ್ ಶರ್ಮಾ, ಸುರೇಂದ್ರ ಠಾಕೂರ್ ಪಕ್ಷ ಬದಲಾಯಿಸಿದ್ದು, ಬಿಜೆಪಿಯ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಮತದಾನ(Voting) ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
- ಮಹೇಶ್.ಪಿ.ಎಚ್