Bengaluru : ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಪ್ರಣಾಳಿಕೆಯು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ PFI (Popular Front of India) ಪ್ರಣಾಳಿಕೆಯಂತೆ ಕಾಣುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Assam Chief Minister Himanta Biswa Sarma) ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮುಸ್ಲಿಮರನ್ನು (Himanta Biswa Sharma statement) ಓಲೈಸುವುದಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದೆ ಎಂದು ಕಿಡಿಕಾರಿದರು.
ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮತ್ತೆ ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲಾಗುವುದು ಅನ್ನೋ ಕಾಂಗ್ರೆಸ್ ಭರವಸೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಹಿಮಂತ್ ಶರ್ಮಾ,
ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್ (Babasaheb Ambedkar) ಹೇಳಿದ್ದರು.
ಇದುವೇ ನಮ್ಮ ಸಂವಿಧಾನದ ಆಧಾರ. ಆದರೆ ಇಂದು ಕಾಂಗ್ರೆಸ್ ಮುಸ್ಲಿಂ ಸಮುದಾಯದ (Muslim community) ಒಲೈಕೆಗಾಗಿ,
ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇವೆ ಎಂದು ಹೇಳುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sharma statement) ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : https://vijayatimes.com/salman-khan-statement/
ಇದೇ ವೇಳೆ ರಾಜ್ಯ ಕಾಂಗ್ರೆಸ್ (State Congress) ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿದ ಅವರು,
ಕಾಂಗ್ರೆಸ್ಪಕ್ಷವು ಮುಸ್ಲಿಮರನ್ನು ಸಮಾಧಾನಪಡಿಸಲು ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಪಿಎಫ್ಐ ಸಂಘಟನೆಯನ್ನು (Organization of PFI) ಈಗಾಗಲೇ ನಿಷೇಧಿಸಲಾಗಿದೆ.
ಸಿದ್ದರಾಮಯ್ಯ (Siddaramaiah) ಸರ್ಕಾರ ತಮ್ಮ ಅಧಿಕಾರಾವಧಿಯಲ್ಲಿ ಪಿಎಫ್ಐ ವಿರುದ್ಧದ ಕೇಸ್ಗಳನ್ನು ಹಿಂಪಡೆದಿದ್ದರು.
ಹಾಗಾಗಿ ಅವರು (ಕಾಂಗ್ರೆಸ್) ಮುಸ್ಲಿಮರನ್ನು ಓಲೈಸಲು ಪಿಎಫ್ಐ ಮತ್ತು ಬಜರಂಗದಳವನ್ನು (Bajrang Dal) ನಿಷೇಧಿಸಲು ಹೇಳುತ್ತಿದ್ದಾರೆ.
ಕಾಂಗ್ರೆಸ್ನ ಪ್ರಣಾಳಿಕೆಯು ಪಿಎಫ್ಐ ಮತ್ತು ಕೆಲವು ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಪ್ರಣಾಳಿಕೆಯಂತೆ ಕಾಣುತ್ತದೆ ಎಂದು ಶರ್ಮಾ ಆರೋಪಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅನುಷ್ಠಾನವು ಮುಸ್ಲಿಂ ಮಹಿಳೆಯರಿಗೆ ಲಿಂಗ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಖಚಿತಪಡಿಸುತ್ತದೆ.
ಬಿಜೆಪಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ (Karnataka) ಯುಸಿಸಿಯನ್ನು ಜಾರಿಗೆ ತರಲಾಗುವುದು.
ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಈ ಸಮಯದ ಅಗತ್ಯವಾಗಿದೆ ಎಂದು ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
ಮುಂಬರುವ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka assembly election) ಪ್ರಣಾಳಿಕೆಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷವು ಬಜರಂಗದಳ,
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ “ನಿರ್ಣಾಯಕ ಕ್ರಮ” ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿತ್ತು.
ಇದನ್ನೂ ಓದಿ : https://vijayatimes.com/iphone-from-tata-electronics/
ಕಾಂಗ್ರೆಸ್ ಪಕ್ಷದ ಈ ನಿರ್ಧಾರಕ್ಕೆ ಇಡೀ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ (BJP) ನಾಯಕರು ಭಜರಂಗದಳವನ್ನು ಬ್ಯಾನ್ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಭಜರಂಗದಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದವಾಗಿ ಕೆಲಸ ಮಾಡಿ ಎಂದು ಕರೆ ನೀಡಿದೆ.
ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ (Karnataka assembly election) ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.