ಬೆಂಗಳೂರು, ಜ. 04: ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಹಿರಿಯ ಕಲಾವಿದ ಶನಿ ಮಹಾದೇವಪ್ಪನವರು (90 ವರ್ಷ) ಇಂದು ಸಂಜೆ ಬೆಂಗಳೂರಿನ KC ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಡಾ.ರಾಜ್ ಕುಮಾರ್ ಜತೆಯಲ್ಲಿ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹೆಗ್ಗಳಿಕೆ ಇವರದು.