ಹುಬ್ಬಳ್ಳಿ – ದಾರವಾಡ ಮತ್ತು ಬೆಳಗಾವಿಯಲ್ಲಿ ಸೆ 3ಕ್ಕೆ ಮಹಾನಗರ ಪಾಲಿಕೆ ಚುನಾವಣೆ

ಬೆಂಗಳೂರು ಆ 31 : ರಾಜ್ಯ ಚುನಾವಣಾ ಅಯೋಗವು ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ರಾಜಕೀಯ ನಾಯಕರ ದಂಡು ಹುಬ್ಬಳ್ಳಿ ಧಾರವಾಡ ಮತ್ತು ಬೆಳಗಾವಿಯತ್ತ ಹರಿದುಬರುತ್ತಿದೆ.

ಚುನಾವಣೆಯು ಸೆ 3 ರಂದು ನಡೆಯಲ್ಲಿದ್ದು ಈ ಹಿನ್ನಲೆಯಲ್ಲಿ ಚುನಾವಣೆ ನಡೆಯುವ ಎಲ್ಲಾ ಪ್ರದೇಶಗಳಲ್ಲಿರುವ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೆಪ್ಟೆಂಬರ್ 3 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಕೇವಲ ಮಹಾನಗರ ಪಾಲಿಕೆ ಮಾತ್ರವಲ್ಲದೆ ನಗರ ಸ್ಥಳೀಯ ಸಂಸ್ಥೆ ಹಾಗೂ ಪಟ್ಟಣ ಪಂಚಾಯಿತಿಗಳಿಗೂ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ.

ಮಹಾನಗರ ಪಾಲಿಕೆಗಳು; ಬೆಳಗಾವಿ (58 ವಾರ್ಡ್), ಹುಬ್ಬಳ್ಳಿ-ಧಾರವಾಡ (82 ವಾರ್ಡ್) ಮತ್ತು ಕಲಬುರಗಿ (55 ವಾರ್ಡ್). ಮಹಾನಗರ ಪಾಲಿಕೆ ಉಪ ಚುನಾವಣೆ; ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್‌ ನಗರ ಸ್ಥಳೀಯ ಸಂಸ್ಥೆಗಳು; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಸಭೆ (1 ರಿಂದ 31ನೇ ವಾರ್ಡ್). ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪುರಸಭೆ (1 ರಿಂದ 23ನೇ ವಾರ್ಡ್). ಬೀದರ್ ಜಿಲ್ಲೆಯ ಬೀದರ್ ನಗರ ಸಭೆ (26 ಮತ್ತು 32ನೇ ವಾರ್ಡ್). ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆ (29ನೇ ವಾರ್ಡ್). ನಗರ ಸ್ಥಳೀಯ ಸಂಸ್ಥೆ ಉಪ ಚುನಾವಣೆ; ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ಸಭೆ (18), ಬೀಳಗಿ ಪಟ್ಟಣ ಪಂಚಾಯಿತಿ (14), ಮಹಾಲಿಂಗಪೂರ ಪುರಸಭೆ (3), ತೇರದಾಳ ಪುರಸಭೆ (3). ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ ಪಂಚಾಯಿತಿ (13), ಸೋಮವಾರಪೇಟೆ ಪಟ್ಟಣ ಪಂಚಾಯಿತಿ (1), ಸೋಮವಾರಪೇಟೆ ಪಟ್ಟಣ ಪಂಚಾಯಿತಿ (3). ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರಸಭೆ (11). ಕಲಬುರಗಿಯ ವಾಡಿ ಪುರಸಭೆ (4), ವಾಡಿ ಪುರಸಭೆ (23). ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರಸಭೆ (11), ಬಸವ ಕಲ್ಯಾಣ ನಗರ ಸಭೆ (23). ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆ (12), ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ (14), ಬೆಳಗಾವಿ ಜಿಲ್ಲೆಯ ರಾಯಭಾಗ್ ಪಟ್ಟಣ ಪಂಚಾಯಿತಿ (9). ಕೊಪ್ಪಳ ಜಿಲ್ಲೆಯ ಸವದತ್ತಿ ಪುರಸಭೆ (23), ಕುಷ್ಟಗಿ ಪುರಸಭೆ (16). ಗದಗ ಜಿಲ್ಲೆಯ ಮುಳುಗುಂದ ಪಟ್ಟಣ ಪಂಚಾಯಿತಿ (18), ರಾಮನಗರ ಜಿಲ್ಲೆಯ ರಾಮನಗರ ನಗರಸಭೆ (4), ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪುರಸಭೆ (21)ಯಲ್ಲಿ ಸೆ 3ರಂದು ಚುನಾವಣೆ ನಡೆಯಲಿದೆ

Latest News

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.