download app

FOLLOW US ON >

Saturday, May 28, 2022
Breaking News
ತೃತೀಯ ರಂಗಕ್ಕೆ ದೇವೇಗೌಡರ ಮಾರ್ಗದರ್ಶನ ; ಕೆಸಿಆರ್ ತಂತ್ರ!ಹಳೇ ಪಠ್ಯಪುಸ್ತಕವನ್ನೇ ಮುಂದುವರೆಸಲು ಕರವೇ ನಾರಾಯಣಗೌಡ ಆಗ್ರಹ!ಹಿಂದಿನ ಸರ್ಕಾರಗಳು ತಂತ್ರಜ್ಞಾನವನ್ನು ಬಡವರ ವಿರೋಧಿ ಎಂದು ಬಿಂಬಿಸಿದ್ದವು : ಮೋದಿ!ಬಿಜೆಪಿಗೆ ಡಿಕೆಶಿ ಅವರಂತ ಕಳ್ಳರ ಅವಶ್ಯಕತೆ ಇಲ್ಲ : ಯತ್ನಾಳ್!ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಸ್ಕಾನ್‍ಗೆ ವಹಿಸಲು ಚಿಂತನೆ!ಮೋದಿ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ : ಹೆಚ್.ಡಿ ಕುಮಾರಸ್ವಾಮಿ!ಚೆನ್ನಪಟ್ಟಣದಲ್ಲಿ ಡಿಕೆಶಿ ವಿರುದ್ದವೇ ಬಂಡಾಯ ಸಾರಿದ ಭಾವ ಶರತ್‍ಚಂದ್ರ!ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ, ಇತ್ತ ‘ಆಪರೇಷನ್ ಕಮಲ’ : ಮೋದಿಗೆ ಹೆಚ್.ಡಿ.ಕೆ ಟಾಂಗ್!ಆರ್‍ಎಸ್‍ಎಸ್‍ನವರು ಮೂಲ ಭಾರತೀಯರಲ್ಲ : ಸಿದ್ದರಾಮಯ್ಯ!ದಾಳಿ ವೇಳೆ ನನ್ನ ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ ಸಿಬಿಐ : ಕಾರ್ತಿ ಚಿದಂಬರಂ!
English English Kannada Kannada

ವಿದೇಶದಿಂದ ಆಗಮಿಸುವವರಿಗೆ ಹೋಮ್‌ ಕ್ವಾರಂಟೈನ್ ಕಡ್ಡಾಯ

ಪ್ರಸ್ತುತ ದೇಶದಲ್ಲಿ ಕೋವಿಡ್ -19 ಹೊಸ ರೂಪಾಂತರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇರಳದಲ್ಲಿ ಇದುವರೆಗೆ 280 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ ಮತ್ತು ಕಡಿಮೆ ಅಪಾಯದ ದೇಶಗಳಿಂದ ಬಂದವರಿಂದ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ

ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಹೋಮ್‌ ಕ್ವಾರಂಟೈನ್‌ ಆಗಲು ಸರ್ಕಾರ ಸೂಚಿಸಿದೆ. ಭಾರತಕ್ಕೆ ಬರುವ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನಗಳ ಕಾಲ ಕಡ್ಡಾಯ ಹೋಮ್ ಕ್ವಾರಂಟೈನ್ ಅನ್ನು ವಿಧಿಸಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಪ್ರಸ್ತುತ ದೇಶದಲ್ಲಿ ಕೋವಿಡ್ -19 ಹೊಸ ರೂಪಾಂತರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ  ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಕೇರಳದಲ್ಲಿ ಇದುವರೆಗೆ 280 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ ಮತ್ತು ಕಡಿಮೆ ಅಪಾಯದ ದೇಶಗಳಿಂದ ಬಂದವರಿಂದ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಹೇಳಿದ್ದಾರೆ

ಕೊರೋನಾ ವೈರಸ್ ಮತ್ತು ಓಮಿಕ್ರಾನ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇರಳ ಸರ್ಕಾರ ಕೂಡ ವಿದೇಶದಿಂದ ಬರುವ ಎಲ್ಲರಿಗೂ ಒಂದು ವಾರ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲು ನಿರ್ಧರಿಸಿದೆ.

ಕೋವಿಡ್ ಅಪಾಯದಲ್ಲಿರುವ ನಿರ್ದಿಷ್ಟ ದೇಶಗಳ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ ಕೂಡಲೇ ಕೋವಿಡ್ ಪರೀಕ್ಷೆಗಾಗಿ ತಮ್ಮ ಮಾದರಿಗಳನ್ನು ನೀಡಬೇಕು ಮತ್ತು ಹೊಸ ನಿಯಮಗಳ ಪ್ರಕಾರ ಅವರ ಪರೀಕ್ಷಾ ಫಲಿತಾಂಶ ಬಂದ ನಂತರವೇ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article