ನಾಲಿಗೆಗೆ ಮಾತ್ರ ಸಿಹಿಯಲ್ಲ, ಆರೋಗ್ಯಕ್ಕೂ ಸಿಹಿ ಈ ಜೇನುತುಪ್ಪ ; ಜೇನು ಸೇವನೆ ಎಷ್ಟು ಪ್ರಯೋಜನ ಇಲ್ಲಿದೆ ಉತ್ತರ!

honey

ಜೇನುತುಪ್ಪವನ್ನು(Honey) ಯಾರು ತಾನೇ ಬೇಡ ಎಂದು ಹೇಳುತ್ತಾರೇ ಹೇಳಿ? ಪ್ರಪಂಚದಲ್ಲಿ ಎಕ್ಸ್ಪೈರಿ ಡೇಟ್(Expiry Date) ಇಲ್ಲದೇ ಇರುವ ಏಕೈಕ ವಸ್ತು ಅಂದ್ರೆ ಅದು ಜೇನುತುಪ್ಪ. ಈ ಜೇನುತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು. ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇಡಬಾರದು. ಯಾರಿಗೆ ಜೇನುತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ತಪ್ಪದೇ ಒಮ್ಮೆ ಓದಿ.

ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ. ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಯಲು ಸಹಾಯ ಮಾಡುತ್ತದೆ. ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು. ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಮಸ್ಯೆ ಕಡಿಮೆಯಾಗುತ್ತದೆ.


ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನಸಿದ ಹತ್ತಿಯನ್ನು ನಾಲ್ಕಾರು ಬಾರಿ ಪ್ರತಿದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣವಾಗುವುದು. ಯಾವುದೇ ಔಷಧಿಯನ್ನು ಜೇನು ತುಪ್ಪದೊಂದಿಗೆ ಸೇವಿಸಿದರೆ ಶೀಘ್ರ ಗುಣ ಕಂಡು ಬರುತ್ತದೆ.
ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು.

ದೈಹಿಕ ಶಕ್ತಿ ಹೆಚ್ಚುವುದು, ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು. ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು. ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತಾರೆ.


ಬಜೆ ಪುಡಿಯೊಂದಿಗೆ ಜೇನುತುಪ್ಪ ಸೇರಿಸಿ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ. ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.

Exit mobile version