ಭಾರತದಲ್ಲಿ Honor X9b ಸ್ಮಾರ್ಟ್‌ಫೋನ್‌ ಅನಾವರಣ:  ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ ಹೊಸ ಸ್ಮಾರ್ಟ್​ಫೋನ್

ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಕ್ಯಾಮೆರಾ ಫೋನುಗಳ (Camera Phones) ಹಾವಳಿ ತಗ್ಗಿತ್ತು. ಹೀಗಿರುವಾಗ ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟಿದ್ದು ಪ್ರಸಿದ್ಧ ಹಾನರ್ ಕಂಪನಿ. ಇತ್ತೀಚೆಗಷ್ಟೆ ಈ ಕಂಪನಿ ದೇಶದಲ್ಲಿ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹೊಸ ಹಾನರ್ X9b ಎಂಬ ಫೋನನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ (Smartphones) ಅಲ್ಟ್ರಾ-ಬೌನ್ಸ್ ಆಂಟಿ-ಡ್ರಾಪ್ 360-ಡಿಗ್ರಿ ತಂತ್ರಜ್ಞಾನವನ್ನು ಹೊಂದಿದೆ. 

ಈ ಸ್ಮಾರ್ಟ್‌ಫೋನ್‌ 4nm ಆಧಾರಿತ Qualcomm Snapdragon 6 Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸಿಂಗಲ್‌ ಚಾರ್ಜಿಂಗ್‌ನಲ್ಲಿ ಇಡೀ ದಿನ ಬ್ಯಾಟರಿ ಬಾಳಿಕೆಯನ್ನು ನೀಡಲಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1200 x 2652 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ.

ಜೊತೆಗೆ 429 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದ್ದು, ಭಾರತದಲ್ಲಿ ಹಾನರ್ X9b ಫೋನ್​ನ 8GB+256GB ಸ್ಟೋರೇಜ್ ಕಾನ್ಫಿಗರೇಶನ್​ಗೆ ಅಮೆಜಾನ್​ನಲ್ಲಿ ಮೂಲಬೆಲೆ 30,999 ರೂ. ಇದೆ. ಆದರೀಗ ಇದು ಶೇ. 16 ರಷ್ಟು ರಿಯಾಯಿತಿ ಪಡೆದುಕೊಂಡಿದ್ದು, 25, 999 ರೂ. ಗೆ ಸೇಲ್ ಆಗುತ್ತಿದೆ. ಈ ಹ್ಯಾಂಡ್‌ಸೆಟ್ ಅನ್ನು ಮಿಡ್‌ನೈಟ್ ಬ್ಲಾಕ್ (Midnight Black) ಮತ್ತು ಸನ್‌ರೈಸ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು.

ಫೋಟೋಗಳು ಮತ್ತು ವಿಡಿಯೋಗಳಿಗಾಗಿ, ಹಾನರ್ X9b 108-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹಾಗೂ 5-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಜೊತೆಗೆ af/2.2 ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು f/2.4 ಅಪರ್ಚರ್‌ನೊಂದಿಗೆ ನೀಡಲಾಗಿದೆ. ಮುಂಭಾಗದಲ್ಲಿ, ಇದು ಸೆಲ್ಫಿಗಳು ಮತ್ತು ವಿಡಿಯೋ ಚಾಟ್‌ಗಳಿಗಾಗಿ 16-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.1, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. 

Exit mobile version