download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಹೊಸ ವರ್ಷಾಚರಣೆಗೆ ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು, ಡಿ. 16: ಕೊರೊನಾ ಎರಡನೆ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ.ಈ ಹಿನ್ನಲೆಯಲ್ಲಿ ಕೆಲವೊಂದು ಕಡೆಗಳಲ್ಲಿ ಹೊಸ ವರ್ಷದ ಸಂಭ್ರಮವನ್ನು ಆಚರಣೆ ಮಾಡುವಂತಿಲ್ಲ.  ಎಂ.ಜಿ.ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 , ವಿಪತ್ತು ನಿರ್ವಹಣೆ ಕಾಯ್ದೆ 2005ರ ಅಡಿಯಲ್ಲಿ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಬಾರ್, ರೆಸ್ಟೋರೆಂಟ್, ಹೋಟೆಲ್‍ಗಳಲ್ಲಿ ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾಧಾರಣವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಹುದು. 200 ಜನರಿಗೆ ಮಾತ್ರ ಅವಕಾಶ ಕಲ್ಪಿಸಬಹುದು. ಸಾಧಾರಣ ಆಚರಣೆಗೂ ಮುಂಚಿತವಾಗಿ ಆನ್‍ಲೈನ್‍ನಲ್ಲಿ ಪಾಸ್ ಪಡೆಯಬೇಕು. ಈ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು ಆರೋಗ್ಯ ಸೇತು ಆಯಪ್ ಕಡ್ಡಾಯ.

ಪಬ್ ಮತ್ತು ಕ್ಲಬ್‍ಗಳಲ್ಲಿ ಶೇ.50ರಷ್ಟು ಜನರು ಮಾತ್ರ ಸೇರಬೇಕು. ಪಬ್‍ಗಳಲ್ಲಿ ಡ್ಯಾನ್ಸ್ ಮತ್ತು ಡಿಜೆ ಸೌಂಡ್ಸ್ ನಿಷೇಧ ಮಾಡಲಾಗಿದೆ. ಕೊರೊನಾ ನಿಯಮಗಳ ಪಾಲನೆ, ಸಾಮಾಜಿಕ ಅಂತರ, ಸ್ಯಾನಿಟೈಸರ್, ಥರ್ಮಲ್‍ಸ್ಕ್ರೀನಿಂಗ್, ನಿಗದಿತ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಂಘಟಕರು ಹೆಚ್ಚು ನಿಗಾ ವಹಿಸುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಸರ್ಕಾರಹೊರಡಿಸಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article