ಮುಂಬೈ, ಎ. 02: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಮಾಸ್ಟರ್ ಬ್ಲಾಸ್ಟರ್ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್ ತಾವು ಆಸ್ಪತ್ರೆಗೆ ದಾಖಲಾಗುತ್ತಿರುವ ಮಾಹಿತಿ ಹಂಚಿಕೊಂಡಿದ್ದು, ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವೇ ದಿನಗಳಲ್ಲಿ ಮನೆಗೆ ಮರಳುತ್ತೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಮಾರ್ಚ್ 27ರಂದು ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಬಳಿಕ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆದರೆ, ಇದೀಗ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.