Dengue cases on the rise in the state: New rules from the state government to control it
Bengaluru: ಮಳೆಗಾಲ (Rainy Season) ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿಯೂ ಹೆಚ್ಚಾಗುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ಡೆಂಗ್ಯೂ (Dengue) ಅಬ್ಬರ ಜೋರಾಗಿದ್ದು, ರಾಜ್ಯದ ವಿವಿಧೆಡೆ ಸಾವುಗಳು ಕೂಡ ಸಂಭವಿಸುತ್ತಿದೆ. ಹಿಂದಿನ ಕಳೆದ ಕೆಲವು ವರ್ಷಗಳಿಗಿಂತ ಈ ಬಾರಿ ಡೆಂಗ್ಯೂ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳದಿಂದಾಗಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಡೆಂಗ್ಯೂವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ. ಅಲ್ಲದೇ ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ (Health Department) ಕೆಲವು ನಿಯಮಗಳನ್ನು ಜಾರಿಗೊಳಿಸಿದೆ.
ರಾಜ್ಯ ಸರ್ಕಾರದ ಹೊಸ ಸೂಚನೆಗಳು
- ಭೂಮಾಲೀಕರು, ಒತ್ತುವರಿದಾರರು ಮತ್ತು ಬಿಲ್ಡರ್ಗಳು (Builders) ತಮ್ಮ ಆವರಣದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲೇ ಬೇಕು.
- ನಿಯಮಗಳನ್ನು ಅನುಸರಿಸುತ್ತಿದ್ದಾರೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳು ಖಾಲಿ ಸ್ಥಳಗಳು, ಕಟ್ಟಡಗಳು, ನೀರಿನ ಟ್ಯಾಂಕ್ಗಳು (Water Tank), ಉದ್ಯಾನವನಗಳು ಮತ್ತು ಆಟದ ಮೈದಾನಗಳನ್ನು ನಿಯಮಿತವಾಗಿ ತಪಾಸಣೆಗಳನ್ನು ನಡೆಸುತ್ತಾರೆ.
- ಸೊಳ್ಳೆ ತಡೆಗಟ್ಟುವ ಕ್ರಮಗಳನ್ನು ಅನುಸರಿಸಲು ವಿಫಲವಾದರೆ ಸಕ್ಷಮ ಪ್ರಾಧಿಕಾರದಿಂದ ದಂಡ ವಿಧಿಸಲಾಗುತ್ತದೆ.
- ಒಂದುವೇಳೆ ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು.
- ಅಲ್ಲದೇ ಶಾಲಾ ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ (Hotel, Lodge, Resort) ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ ಪ್ರದೇಶಗಳಲ್ಲಿ 1000 ರೂ. ದಂಡ ನಿಗದಿಪಡಿಸಲಾಗಿದ್ದು, ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂ. ಹಾಗೂ ನಗರ ಪ್ರದೇಶಗಳಲ್ಲಿ 2000 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ.
How to Control Dengue Outbreak In Kannada
Bengaluru: As the rainy season begins, the incidence of infectious diseases also increases in the state. Like every year, dengue is rampant this time and deaths are also occurring in different parts of the state. This time dengue fever is appearing more than the previous few years. Due to the increase in dengue cases, the Karnataka government has declared dengue as an epidemic in the state. Also, the health department has implemented some rules to control dengue in the state.
New Notifications of State Govt
- Land owners, occupiers and builders must take necessary measures to prevent mosquito breeding in their premises.
- Officials conduct regular inspections of vacant lots, buildings, water tanks, parks and playgrounds to ensure compliance with rules.
- Failure to follow mosquito prevention measures will be fined by the competent authority.
- Rs 200 for households in rural areas if dengue guidelines are not followed. And a fine of 400 rupees will be imposed in urban areas.
500 in rural areas and 1000 in urban areas for commercial associations and organizations including schools, colleges, hotels, lodges, resorts. A fine has been fixed and Rs 1000 for rural areas in building construction and outdoor places. And 2000 in urban areas. Health Minister Dinesh Gundurao said that fine will be imposed.