ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಹೊಯ್ಸಳ ದೇವಾಲಯಗಳ ಸೇರ್ಪಡೆ ; ಮೋದಿ ಅಭಿನಂದನೆ

Bengaluru: ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ನಿರ್ಮಾಣದ ಬೇಲೂರು @Beluru, ಹಳೇಬೀಡು ಮತ್ತು ಸೋಮನಾಥಪುರದ ದೇವಾಲಯಗಳು ಸೇರ್ಪಡೆಯಾಗಿವೆ.

ಇನ್ನು ವಿಶಿಷ್ಟವಾದ ಕಲಾ ನೈಪುಣ್ಯದ ಹೊಂದಿರುವ ಪ್ರಸಿದ್ದ ಹೊಯ್ಸಳ ದೇವಾಲಯಗಳು, 2014 ರಿಂದಲೂ ಯುನೆಸ್ಕೊದ #UNESCO ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಆದರೆ 2022ರಲ್ಲಿ ಭಾರತ ವಿಶ್ವ ಪಾರಂಪರಿಕ ಪಟ್ಟಿಗೆ ಪರಿಗಣಿಸುವಂತೆ ನಮವಿ ಮಾಡಿತ್ತು. ಈಗ ಯುನೆಸ್ಕೊ ಕರ್ನಾಟಕದ (Karnataka) ಭವ್ಯ ಕಲೆ, ವಾಸ್ತುಶಿಲ್ಪ ಹಾಗೂ ಸಂಸ್ಕೃತಿಯ ಪ್ರತೀಕವಾಗಿರುವ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರ (Somanathapura) ದೇವಾಲಯಗಳ ಐತಿಹಾಸಿಕ ಹೊಯ್ಸಳ ಶಿಲ್ಪ ದೇವಾಲಯಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಭಾರತಕ್ಕೆ ಮತ್ತಷ್ಟು ಹೆಮ್ಮೆ. ಹೊಯ್ಸಳರ ಭವ್ಯ ಮತ್ತು ಪವಿತ್ರ ಶಿಲ್ಪ ಸಂಕೀರ್ಣಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸೂಕ್ಷ್ಮ ಕುಸುರಿ ಕೆಲಸಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಿಕರ ಅಸಾಧಾರಣ ಶಿಲ್ಪ ಕೌಶಲ್ಯಕ್ಕೆ ಸಾಕ್ಷಿಯಾಗಿದೆ. ಇದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ವಿಷಯ. ಇದು ತಾಯಿ ಭುವನೇಶ್ವರಿಗೆ ಸಂದ ಗೌರವ. ಇದು ತಾಯಿ ಭಾರತಿಗೆ ಸಂದ ಗೌರವ. ಭಾರತಕ್ಕೆ ಮತ್ತಷ್ಟು ಹೆಮ್ಮೆ ಎಂದಿದ್ದಾರೆ.

ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೂಡಾ ಟ್ವೀಟ್ ಮಾಡಿದ್ದು, ಹೊಯ್ಸಳರ ಭವ್ಯ ಮತ್ತು ಪವಿತ್ರ ಶಿಲ್ಪ ಸಂಕೀರ್ಣಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸೂಕ್ಷ್ಮ ಕುಸುರಿ ಕೆಲಸಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಿಕರ ಅಸಾಧಾರಣ ಶಿಲ್ಪ ಕೌಶಲ್ಯಕ್ಕೆ ಸಾಕ್ಷಿಯಾಗಿದೆ.

ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದು ಖುಷಿಯ ಜೊತೆಗೆ ಹೆಮ್ಮೆಯ ಸಂಗತಿ ಕೂಡ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ ಮೂಲಸೌಲಭ್ಯ ಮತ್ತು ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಐತಿಹಾಸಿಕ ಸ್ಥಳಗಳು ಮತ್ತು ಪುಣ್ಯಕ್ಷೇತ್ರಗಳ ತೊಟ್ಟಿಲು ಕರ್ನಾಟಕಕ್ಕೆ ಸ್ವಾಗತ ಎಂದಿದ್ದಾರೆ. ಇನ್ನು ದೇಶದಲ್ಲಿರುವ ಒಟ್ಟು ವಿಶ್ವ ಪಾರಂಪರಿಕ ತಾಣಗಳ ಸಂಖ್ಯೆ ಹೊಯ್ಸಳ ದೇವಾಲಯಗಳ ಸೇರ್ಪಡೆಯೊಂದಿಗೆ 42ಕ್ಕೆ ಏರಿಕೆಯಾಗಿದೆ.

Exit mobile version