Visit Channel

HPCL​ನಲ್ಲಿಗ್ರಾಜುಯೇಟ್​ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅವಕಾಶ

ನವದೆಹಲಿ ನ 26 : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (Hindustan Petroleum Corporation Limited-HPCL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. HPCL​ನಲ್ಲಿ ಗ್ರಾಜುಯೇಟ್​ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. HPCL ನಲ್ಲಿ ನೌಕರಿ ಮಾಡ ಬಯಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 23 ರಿಂದ ಡಿಸೆಂಬರ್ 06 ರವರೆಗೆ ಆನ್​ಲೈನ್(Online)​ನಲ್ಲಿ ಅರ್ಜಿ ಹಾಕಬಹುದಾಗಿದೆ.

ಅಭ್ಯರ್ಥಿಗಳು HPCLನ ಅಧಿಕೃತ ವೆಬ್​ಸೈಟ್​ hindustanpetroleum.com  ಗೆ ಭೇಟಿ ನೀಡಿ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06/12/2021

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಇನ್‌ಸ್ಟ್ರುಮೆಂಟೇಶನ್, ಕಂಪ್ಯೂಟರ್ ಸೈನ್ಸ್ (ಐಟಿ) ನಲ್ಲಿ ಇಂಜಿನಿಯರಿಂಗ್ ಪದವಿಯನ್ನು ಶೇ.60ರಷ್ಟು ಅಂಕಗಳೊಂದಿಗೆ ಪಡೆದಿರಬೇಕು.

ವಯೋಮಿತಿ:

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 25 ವರ್ಷದೊಳಗಿರಬೇಕು.ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, SC/ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ : ​ hindustanpetroleum.com  ವೆಬ್‌ಸೈಟ್‌ಗೆ ಭೇಟಿ ನೀಡಿ

Latest News

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Assam
ದೇಶ-ವಿದೇಶ

ತನ್ನ ಪ್ರೀತಿಯನ್ನು ನಿರೂಪಿಸಲು, ಏಡ್ಸ್ ರೋಗವಿರುವ ಪ್ರಿಯಕರನ ರಕ್ತವನ್ನು ತನ್ನ ದೇಹಕ್ಕೆ ಚುಚ್ಚಿಕೊಂಡ 15 ವರ್ಷದ ಹುಡುಗಿ!

ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!