ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲ ಅಂತಾದ್ರೆ ಆತಂಕ ಬೇಡ: ಜುಲೈ 4ರ ವರೆಗೆ ಅವಧಿ ವಿಸ್ತರಿಸಲು ಹೈಕೋರ್ಟ್ ಆದೇಶ

Bengaluru: 2019 ಏಪ್ರಿಲ್ 1ಕ್ಕಿಂತ ಮೊದಲು ಖರೀದಿಸಿದ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಕೊನೆಯದಾಗಿ ನೀಡಿದ್ದ ಡೆಡ್​ಲೈನ್ ಮುಗಿಯುತ್ತಿತ್ತು. ಆದರೆ, ಇನ್ನೂ ಲಕ್ಷಾಂತರ ವಾಹನ ಸವಾರರಿಗೆ ಸರ್ವರ್ ದೋಷದಿಂದ ನಂಬರ್ ಪ್ಲೇಟ್ ಮಾಡಿಸಲು ಸಾಧ್ಯವಾಗದ ಕಾರಣ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್​ (Karnataka High Court) ಸಿಹಿ ಸುದ್ದಿ ನೀಡಿದೆ.

ಇನ್ನೂ ಹೆಚ್ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಜುಲೈ 4 ರ ವರೆಗೆ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಕರ್ನಾಟಕ (Karnataka) ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿದೆ.ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ (State Government ) 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು.

ಇದೀಗ ಹೈಕೋರ್ಟ್​ ಮಧ್ಯಂತರ ಆದೇಶ ಜುಲೈ 4 ರವರೆಗೆ ವಿಸ್ತರಣೆಯಾಗಿದ್ದು, ಅಲ್ಲಿಯ ವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸರ್ವರ್ ದೋಷ ಹಾಗೂ ಇನ್ನಿತರ ಸಮಸ್ಯೆಗಳಿಗೆ ಪರಿಹಾರ ದೊರೆಯದ ಕಾರಣ ಹಲವಾರು ವಾಹನ ಸವಾರರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕೊಂಚ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ.ಹಾಗಾಗಿ ಯಾವುದೇ ರೀತಿಯಲ್ಲೂ ದಂಡ (Fine) ಹಾಕುವಂತಿಲ್ಲ ಜತೆಗೆ, ರಾಜ್ಯ ಸರ್ಕಾರವು ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಕೋರ್ಟ್ ಅನುವು ಮಾಡಿಕೊಟ್ಟಿದೆ. ಹೀಗಾಗಿ ಇದೀಗ ಸರ್ಕಾರ ಅವಧಿ ವಿಸ್ತರಣೆ ಮಾಡಿ ಅಧಿಕೃತ ಆದೇಶ ಹೊರಡಿಸಲಿದೆ.

Exit mobile version