ಅಪರಾಧದ ಪ್ರಶ್ನೆ ಎದುರಾದಾಗ ಯಾವುದೇ ಜಾತಿ, ಧರ್ಮದ ಪರವಲ್ಲ ನಮ್ಮ ಪಕ್ಷ : ಸಿದ್ದರಾಮಯ್ಯ!

congress

ಹಳೇ ಹುಬ್ಬಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣ ಕ್ಷಣ ಕ್ಷಣಕ್ಕೂ ಒಂದಲ್ಲ ಒಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 100ಕ್ಕೂ ಹೆಚ್ಚು ಜನರನ್ನು ವಶಪಡಿಸಿಕೊಂಡಿದ್ದಾರೆ. ಆದರಲ್ಲಿ 80 ಜನರನ್ನು ಪರಿಶೀಲನೆ ಬಳಿಕ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ(Basavaraj Bommai) ಸುದ್ದಿಗಾರರೊಂದಿಗೆ ಮಾತನಾಡಿ, ಹುಬ್ಬಳ್ಳಿ(Hubbali) ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ.

ಈ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನೆ ಹಿಂದೆ ಯಾರ ಕೈವಾಡವಿದೆ, ಯಾವ ನಾಯಕರು ಇದ್ದಾರೆ? ಯಾರು ತಪ್ಪಿತಸ್ಥರಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಮ್ಮ ಹೇಳಿಕೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೂ ಅರ್ಥವಾಗುವಂತೆ ಪರೋಕ್ಷವಾಗಿ ಕುಟುಕಿದ್ದಾರೆ. ಈ ಹೇಳಿಕೆಯ ಬೆನ್ನಲ್ಲೇ ಹಲವು ನಾಯಕರ ವಾದಗಳು ಹರಿದಾಡಿದವು, ಅದರಂತೆಯೇ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು,

” ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ. ನಾವು ಸತ್ಯ, ನ್ಯಾಯ ಮತ್ತು ನೆಲದ ಕಾನೂನಿಗೆ ಬದ್ಧ. ಪೊಲೀಸರು ನೆಲದ ಕಾನೂನಿಗೆ ನಿಷ್ಠರಾಗಿ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲ ಇದೆ. ರಾಜಕೀಯ ಪೂರ್ವಗ್ರಹಪೀಡಿತರಾಗಿ ಕೈಗೊಳ್ಳುವ ನಿರ್ಧಾರಗಳಿಗಷ್ಟೇ ನಮ್ಮ ವಿರೋಧವಿದೆ” ಎಂದು ಹೇಳುವ ಮುಖೇನ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

Exit mobile version