ಹುಬ್ಬಳಿ ವಿಮಾನ ನಿಲ್ದಾಣ ಸೇರಿ 13 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಕ್ಕೆ ಪಟ್ಟಿ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ ಅ 26 : ಇಗಾಗಲೇ ಸರ್ಕಾರ ಹಲವು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಿದ್ದು ಈಗ ಆ ಪಟ್ಟಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ಕೂಡ ಸೇರ್ಪಡೆಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ಸರ್ಕಾರಿ ಸ್ವಾಮ್ಯದ ಭಾರತೀಯ ವಿಮಾನಯಾನ ಪ್ರಾಧಿಕಾರದಡಿ ನಡೆಯುತ್ತಿರುವ 13 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರದ ಮುಂದಾಗಿದೆ. ಈ ನಿಟ್ಟಿನಲ್ಲಿ ಮಾರ್ಚ್ ತಿಂಗಳಾಂತ್ಯದ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿ

ದೇಶದ 13 ವಿಮಾನ ನಿಲ್ದಾಣಗಳ ಖಾಸಗೀಕರಣ ಪಟ್ಟಿ

ಕೇವಲ 13 ವಿಮಾನ ನಿಲ್ದಾಣಗಳಲ್ಲದೇ ಒಟ್ಟು 25 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಯೋಜನೆ ರಾಷ್ಟ್ರೀಯ ಹಣಗಳಿಕೆಯ ಯೋಜನೆಯ (NMP) ಭಾಗವಾಗಿ ಈಗ ಯೋಜನೆ ಹಾಕಿಕೊಂಡಿರುವ 13 ವಿಮಾನ ನಿಲ್ದಾಣಗಳೂ ಸೇರಿದಂತೆ ಮುಂದಿನ ನಾಲ್ಕು ವರ್ಷಗಳಲ್ಲಿ ಒಟ್ಟು 25 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ. 2005-6ರಲ್ಲಿ ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದ್ರಾಬಾದ್ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲಾಯಿತು. ಇದರ ಬೆನ್ನಲ್ಲೇ 2019ರಲ್ಲಿ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ನಿರ್ವಹಣೆಗೆ ನೀಡಲಾಯಿತು. ಲಾಭ ಗಳಿಸುವ ವಿಮಾನ ನಿಲ್ದಾಣಗಳ ಖಾಸಗೀಕರಣದೊಂದಿಗೆ ವಲಯವನ್ನು ಉದಾರೀಕರಣಗೊಳಿಸುವುದು ಸರ್ಕಾರದ ಯೋಜನೆಯಾಗಿದೆ. ಖಾಸಗೀಕರಣಗೊಂಡ ವಿಮಾನ ನಿಲ್ದಾಣಗಳ ಆದಾಯದ ಹಂಚಿಕೆಯ ಮೂಲಕ ಗಳಿಸಿದ ಲಾಭವನ್ನು ಮತ್ತೊಂದು ವಲಯದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳುವ ಬಗ್ಗೆ ಭಾರತೀಯ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.

Exit mobile version