ನೇಹಾ ಹತ್ಯೆಯ ಆರೋಪಿಯ ಹೆಸರು ಉಲ್ಲೇಖಿಸದೇ ಸಿಎಂ ಸಿದ್ದರಾಮಯ್ಯ ಸಂತಾಪ ; ನೆಟ್ಟಿಗರ ಆಕ್ರೋಶ..!

Dharwad: ಕಾಲೇಜಿನ ಆವರಣದಲ್ಲಿಯೇ ಮುಸ್ಲಿಂ ಯುವಕನೊಬ್ಬ ತನ್ನ ಪ್ರೀತಿಯನ್ನು (Hubballi Neha Hiremath Case) ಒಪ್ಪದ ಹುಡುಗಿಯನ್ನು ಬರ್ಬರವಾಗಿ ಕೊಂದು ಹಾಕಿರುವ ಘಟನೆ ಇಡೀ

ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆಯಿಂದ ಸಾರ್ವಜನಿಕರಲ್ಲಿ ಭಾರೀ ಆಕ್ರೋಶ ಭುಗಿಲೆದ್ದಿದೆ

Metropolitan Corporation) ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ (Niranjan Hiremath) ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ

ಈ ಮಧ್ಯೆ ಹತ್ಯೆಗೀಡಾದ ನೇಹಾ ಹಿರೇಮಠ ಸಾವಿಗೆ ಸಂತಾಪ ಸೂಚಿಸಿ, ಸಿಎಂ ಸಿದ್ದರಾಮಯ್ಯನವರು, (CM Siddaramaiah) ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ (Hubli – Dharwad

ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ

ಸೂಚಿಸಿದ್ದೇನೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು.

ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ (Hubballi Neha Hiremath Case) ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಆರೋಪಿಯ ಹೆಸರನ್ನು ಉಲ್ಲೇಖಿಸದೇ ಟ್ವೀಟ್ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಆರೋಪಿ ಹೆಸರು ಫಯಾಜ್ ಅಂತ ಹೇಳಿ ಸ್ವಾಮಿ”

(Tell me the name of the accused is Fayaz, sir) ಅನೇಕರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಇನ್ನು ನೇಹಾ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ಅರಾಜಕತೆಯೇ ಆಡಳಿತದ ಧ್ಯೇಯ – ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ಮಂತ್ರ. ಸಿಎಂ ಸಿದ್ದರಾಮಯ್ಯ ಅವರೇ,

ಇದು ಅರಾಜಕತೆಯ ಹಾಗೂ ಓಲೈಕೆ ಆಡಳಿತದ ಪ್ರತಿಫಲವಾಗಿ ಹುಬ್ಬಳ್ಳಿಯ ಬಿವಿಬಿ (BVB) ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಚಾಕು ಇರಿದು ಸಾಯಿಸಿದ್ದಾನೆ.

ನಿಮ್ಮ ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ ಎಂಬುದಕ್ಕೆ ಉತ್ತರ ನೀಡಿ. ರಾಜ್ಯದ ಕಾಂಗ್ರೆಸ್ (State Congress) ಆಡಳಿತದಲ್ಲಿ ತುಷ್ಟಿಕರಣ ಹಾಗೂ ಸಮಾಜಘಾತಕ ಶಕ್ತಿಗಳ ಪುಷ್ಟಿಕರಣದಿಂದಾಗಿ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ. ಕಾಂಗ್ರೆಸ್ ಸರ್ಕಾರವು ಈ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಸಮಾಜವು ಪ್ರತಿಭಟನೆಗೆ ಮುಂದಾಗುವುದು ಎಂದಿದೆ.

ಇದನ್ನು ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಂತೆ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿ ಜಾರಿ: ಮಲ್ಲಿಕಾರ್ಜುನ ಖರ್ಗೆ

Exit mobile version