Hubballi: ಇಂದು ನಡೆದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಕೊನೆಗೂ ಗೆದ್ದು ಬೀಗಿದೆ. ಮಹಾನಗರ ಪಾಲಿಕೆಯನ್ನು (Hubli Dharwad BJP Mayor) ಕಾಂಗ್ರೆಸ್ ವಶಕ್ಕೆ ಪಡೆಯಬೇಕೆಂದು

ತೀವ್ರ ಕಸರತ್ತು ನಡೆಸಿದ್ದ ಜಗದೀಶ್ ಶೆಟ್ಟರ್ ಅವರಿಗೆ (Hubli Dharwad BJP Mayor) ಮುಖಭಂಗ ಉಂಟಾಗಿದೆ.
ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು ಸದಸ್ಯರ ಬಲ 82 ಆಗಿದ್ದು ಅಧಿಕಾರ ಹಿಡಿಯಲು 46 ಮತಗಳು ಬೇಕಿತ್ತು. ಬಿಜೆಪಿ ಕಾರ್ಪೊರೇಟರ್ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್ 33, ಪಕ್ಷೇತರ 6, AIMIM 3,
ಜೆಡಿಎಸ್ 1 ಸ್ಥಾನ ಹೊಂದಿತ್ತು.
ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು, ಇದರಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿವೆ.
ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿತ್ತು. ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಬಿಜೆಪಿಯ ವೀಣಾ ಬಾರದ್ವಾಡ್

ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್ ಆಗಿ ಆಯ್ಕೆಯಾದರು. ಮೇಯರ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್ನಿಂದ ಸುವರ್ಣ
ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ಅವರು 37 ಮತಗಳನ್ನು ಪಡೆದುಕೊಂಡು ಪರಾಭವಗೊಂಡರು.
ಇದನ್ನು ಓದಿ: ಬೆಂಗಳೂರಿನಲ್ಲಿ ಇಂದು ಮುಂದುವರೆಯಲಿದೆ ಒತ್ತುವರಿ ಕಾರ್ಯಾಚರಣೆ: ಪಾಲಿಕೆ ಟಾರ್ಗೆಟ್ ನಲ್ಲಿವೆ 600 ಅಕ್ರಮ ಸ್ಥಳಗಳು
ಇನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜಗದೀಶ ಶೆಟ್ಟರ್, ಪ್ರಸಾದ್ ಅಬ್ಬಯ್ಯ ಸೇರಿದಂತೆ ಕಾಂಗ್ರೆಸ್ನ ಎಲ್ಲ ಮುಖಂಡರು ಪಾಲಿಕೆಯನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು
ಭಾರೀ ಕಸರತ್ತು ನಡೆಸಿದ್ದರು. ಇದನ್ನರಿತ ಬಿಜೆಪಿ ತನ್ನ ಎಲ್ಲ ಸದಸ್ಯರನ್ನು ದಾಂಡೇಲಿಯ ರೆಸಾರ್ಟ್ನಲ್ಲಿ ಇರಿಸಿಟ್ಟು, ಪ್ರತಿತಂತ್ರ ರೂಪಿಸಿತ್ತು. ಇನ್ನೊಂದೆಡೆ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿಗೆ ಮತದಾನ
ಮಾಡಲು ಸಾಧ್ಯವಾಗಲಿಲ್ಲ. ಧಾರವಾಡ ಜಿಲ್ಲೆ ಪ್ರವೇಶಿಸದಂತೆ ತನ್ನ ಮೇಲಿರುವ ನಿರ್ಬಂಧವನ್ನು ಎರಡು ಗಂಟೆಗಳ ಮಟ್ಟಿಗಾದರೂ ತೆರವುಗೊಳಿಸುವಂತೆ ಅವರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಆದರೆ ಕೋರ್ಟ್ ವಿನಯ್ ಕುಲಕರ್ಣಿಗೆ ಅವನ ಮನವಿಯನ್ನು ತಿರಸ್ಕರಿಸಿತ್ತು.