Hubballi: ನಾನು ನಿನ್ನನ್ನ ಪ್ರೀತಿಸ್ತೀನಿ. ಹಾಗಾಗಿ ನೀನು ನನ್ನ ಪ್ರೀತಿಯನ್ನು ಒಪ್ಪಿಕೊಳ್ಳಬೇಕು. ನಾನು ಕರೆದಲ್ಲಿಗೆ ನನ್ನ ಜೊತೆಯಲ್ಲಿ ಬರಬೇಕು. ಇಲ್ಲವಾದರೆ ನೇಹಾಳನ್ನು ಕೊಲೆ ಮಾಡಿದ ಮಾದರಿಯಲ್ಲಿಯೇ ನಿನ್ನನ್ನೂ ಕೊಲೆ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪಾಗಲ್ ಪ್ರೇಮಿ ಕೊನೆಗೆ ಮಾತು ಕೇಳದ ತನ್ನ ಪ್ರಿಯತಮೆ ಅಂಜಲಿಯನ್ನು (Anjali) ನೇಹಾ (Neha) ಮಾದರಿಯಲ್ಲೇ ಮರ್ಡರ್ (Murder) ಮಾಡಿ ಪರಾರಿ ಆಗಿದ್ದಾನೆ.
ನೇಹಾ ಹಿರೇಮಠ (Neha Hiremath) ಕೊಲೆಯ ಕಹಿ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (Hubli) ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ನಸುಕಿನ ಜಾವ (Early morning) ನಸುನಿದ್ದೆಯಲ್ಲಿದ್ದ ಯುವತಿಯನ್ನು (young woman) ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ (Bendigeri Police Station) ವ್ಯಾಪ್ತಿಯ ವೀರಾಪುರ ಓಣಿ ಸಾಕ್ಷಿಯಾಗಿದೆ. ಮೃತ ಯುವತಿಯನ್ನು (young woman) ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ. ವಿಶ್ವ ಅಲಿಯಾಸ್ ಗಿರೀಶ್ (Girish) ಎಂಬಾತ ಈ ಯುವತಿಯನ್ನು ಹತ್ಯೆ ಮಾಡಿದ ನಂತರ ತಲೆಮರೆಸಿಕೊಂಡಿದ್ದಾನೆ.
ಅಷ್ಟಕ್ಕೂ ನೇಹಾ (Neha) ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿಗೆ ವಿಶ್ವ (Anjili Vishwa) ಒಂದು ವಾರದ ಹಿಂದೆಯೇ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.ಈ ಹಿಂದೆ ಮೈಸೂರಿಗೆ (Mysore) ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.