• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ: ಉತ್ಪಾದನೆ, ಐಟಿ, ಬ್ಯಾಂಕಿಂಗ್ ಸೇರಿ ಹಲವು ಕ್ಷೇತ್ರಗಳ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ: ಉತ್ಪಾದನೆ, ಐಟಿ, ಬ್ಯಾಂಕಿಂಗ್ ಸೇರಿ ಹಲವು ಕ್ಷೇತ್ರಗಳ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ
0
SHARES
7
VIEWS
Share on FacebookShare on Twitter
  • ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರಾಮನಗರದಲ್ಲಿ (Huge job fair in Ramanagara) ಮಾರ್ಚ್ 5 ರಂದು ಭರ್ಜರಿ ಜಾಬ್ ಫೇರ್
  • ಎಸ್‌ಎಸ್‌ಎಲ್‌ಸಿ ರಿಂದ ಪದವೀಧರರವರೆಗೆ ಎಲ್ಲರಿಗೂ ಅವಕಾಶ, ನೇರ ಸಂದರ್ಶನದ ಮೂಲಕ ನೇಮಕ
  • ಉತ್ಪಾದನಾ, ಐಟಿ, ಬ್ಯಾಂಕಿಂಗ್ ಸೇರಿ ಹಲವು ಕ್ಷೇತ್ರಗಳಲ್ಲಿ ಸಾವಿರಾರು ಹುದ್ದೆಗಳು ಲಭ್ಯ

Ramnagar: ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ (Huge job fair in Ramanagara) ಮತ್ತೊಂದು ಮಹತ್ವದ ಅವಕಾಶ ಒದಗಿದೆ.

ರಾಮನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತವಾಗಿ ಮಾರ್ಚ್ 5ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಸಾವಿರಾರು ಯುವಜನತೆಗೆ ನೇರ ಸಂದರ್ಶನದ ಮೂಲಕ ಉದ್ಯೋಗ ದೊರಕುವ ಅವಕಾಶ ಕಲ್ಪಿಸಲಾಗಿದೆ.

Huge job fair in Ramanagara

ರಾಮನಗರ ಟೌನ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಮೇಳ ನಡೆಯಲಿದೆ.

ಜಿಲ್ಲೆಯ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡುವುದು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದ ದಾರಿ ತೆರೆದು ಕೊಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.

ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ (Yashwant V. Gurukar) ಮಾಹಿತಿ ನೀಡುವಂತೆ, ಈಗಾಗಲೇ 170ಕ್ಕೂ ಹೆಚ್ಚು (Huge job fair in Ramanagara) ಕಂಪನಿಗಳು ತಮ್ಮ ಭಾಗವಹಿಸುವಿಕೆಯನ್ನು ದೃಢಪಡಿಸಿದ್ದು, ಒಟ್ಟು 200ಕ್ಕೂ ಹೆಚ್ಚು ಪ್ರತಿಷ್ಠಿತ ಸಂಸ್ಥೆಗಳು ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಉತ್ಪಾದನಾ ವಲಯ, ಬ್ಯಾಂಕಿಂಗ್ ಕ್ಷೇತ್ರ, ಮಾರಾಟ, ಮಾಹಿತಿ ತಂತ್ರಜ್ಞಾನ, ಗಾರ್ಮೆಂಟ್ಸ್, ಸೇವಾ ಹಾಗೂ ಪ್ರವಾಸೋದ್ಯಮ, ಹಣಕಾಸು ಮತ್ತು ನಿರ್ವಹಣಾ ವಿಭಾಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.

ಒಟ್ಟಾರೆ 20,000ಕ್ಕೂ ಅಧಿಕ ಹುದ್ದೆಗಳು ಭರ್ತಿಯಾಗಲಿದ್ದು, ವಿವಿಧ ಅರ್ಹತೆಗಳ ಅಭ್ಯರ್ಥಿಗಳಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸಲಾಗಿದೆ.

ವಿದ್ಯಾರ್ಹತೆ ಆಧಾರವಾಗಿ ನೋಡಿದರೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಹಾಗೂ ಅನುತ್ತೀರ್ಣ ಅಭ್ಯರ್ಥಿಗಳಿಗೆ ಸಾವಿರಕ್ಕೂ ಹೆಚ್ಚು ಹುದ್ದೆಗಳು ಲಭ್ಯವಿದ್ದು,

ಐಟಿಐ, ಡಿಪ್ಲೊಮಾ (ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್), ಪದವಿ ಮತ್ತು ಸ್ನಾತಕೋತ್ತರ ಪದವೀಧರರಿಗೆ ಸಹ ಸಾವಿರಾರು ಉದ್ಯೋಗಾವಕಾಶಗಳಿವೆ.

ವಿಶೇಷವಾಗಿ ತಾಂತ್ರಿಕ ವಿದ್ಯಾಭ್ಯಾಸ ಪಡೆದ ಯುವಕರಿಗೆ ಹೆಚ್ಚಿನ ಬೇಡಿಕೆ ಇರುವುದಾಗಿ ತಿಳಿಸಲಾಗಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಅರ್ಹತೆ ಹೊಂದಿದ

ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಿ ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆಯಬಹುದು.

ಪೂರ್ವ ನೋಂದಣಿಗಾಗಿ ಗೂಗಲ್ ಫಾರ್ಮ್ ಸೌಲಭ್ಯ ಕಲ್ಪಿಸಲಾಗಿದ್ದು, ನೋಂದಣಿ ಮಾಡದವರಿಗೂ ಮೇಳದ ದಿನ ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ಸಂದರ್ಶನಕ್ಕೆ ಹಾಜರಾಗುವ ಅವಕಾಶ ಇದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ, ಈ ಮೇಳವು ಜಿಲ್ಲೆಯ ಯುವಕರ ಭವಿಷ್ಯ ರೂಪಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉದ್ಯೋಗಕ್ಕಾಗಿ ದೂರದ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ಕಡಿಮೆ ಮಾಡುವುದು ಮತ್ತು ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

ಉದ್ಯೋಗಾಕಾಂಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಮೇಳದಲ್ಲಿ ಭಾಗವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬೃಹತ್ ಉದ್ಯೋಗ ಮೇಳವು ಸಾವಿರಾರು ಕುಟುಂಬಗಳಿಗೆ ಆಶಾಕಿರಣವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಇದನ್ನು ಓದಿ : https://vijayatimes.com/hdfc-bank-locker-rent-hike/

Tags: employmentITJobramanagaravacancy

Related News

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್
ಪ್ರಮುಖ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್

March 7, 2026
ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ
ದೇಶ-ವಿದೇಶ

ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ

March 7, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.