ಹುಂಡಿಗಳ ನಿರ್ವಹಣೆ ಖಾಸಗಿಯವರು ಮಾಡುವಂತಿಲ್ಲ: ಸರ್ಕಾರ ಮಹತ್ವದ ಆದೇಶ

ಬೆಂಗಳೂರು, ಡಿ. 20: ಜಾತ್ರೆ, ರಥೋತ್ಸವ, ಉತ್ಸವ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳಂದು ಹುಂಡಿಗಳ ನಿರ್ವಹಣೆಯನ್ನು ಖಾಸಗಿಯವರು ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಒಂದುವೇಳ ಅಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂಬುದಾಗಿ ಧಾರ್ಮಿಕ ದತ್ತಿ ಇಲಾಖೆ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ನಡೆಯಲಿರುವ ಜಾತ್ರೆ, ರಥೋತ್ಸವ, ಉತ್ಸವ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳಂದು ಖಾಸಗಿ ವ್ಯಕ್ತಿಗಳು ಹುಂಡಿಗಳನ್ನು ಇಟ್ಟು, ಹುಂಡಿಯಿಂದ ಸಂಗ್ರಹವಾಗುವ ಹಣವನ್ನು ಖಾಸಗಿಯವರು ನಿರ್ವಹಿಸುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯ 1997ರ ಕಲಂ 69(ಬಿ)ರಂತೆ, ಯೊವೊಬ್ಬ ವ್ಯಕ್ತಿಯು, ಯಾವುದೇ ಸಂಸ್ಥೆಯು ಸೇವಾ ಸಮಿತಿ ಅಥವಾ ಅಭಿವೃದ್ಧಿ ಸಂಸ್ಥೆಯು ನೋಂದಾಯಿತವಾಗಿರಲಿ ಅಥವಾ ನೋಂದಾಯಿತವಾಗಿಲ್ಲದಿರಲಿ, ನಿಯಮಿಸಲಾದ ಪ್ರಾಥಿಕಾರದಿಂದ ಅದು ಮಂಜೂರಾತಿ ಪಡೆದ ಹೊರತು, ಅಧಿಸೂಚಿತ ಸಂಸ್ಥೆಯ ಅಥವಾ ಘೋಷಿತ ಸಂಸ್ಥೆಯ ಹೆಸರಿನಲ್ಲಿ, ಯಾವುದೇ ಉದ್ದೇಶಕ್ಕಾಗಿ ಸೇವಾ ನಿಧಿಯನ್ನು ಅಥಾವ ದೇಣಿಗೆಯನ್ನು ಸಂಗ್ರಹಿಸಲು ಹಕ್ಕನ್ನು ಹೊಂದಿರತಕ್ಕದ್ದಲ್ಲ ಎಂದು ತಿಳಿಸಲಾಗಿದೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.