ತೌಕ್ತೆ ಚಂಡಮಾರುತದ ಅಬ್ಬರ: ಗುಜರಾತ್, ದಿಯು ಪ್ರದೇಶದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ಹೊಸದಿಲ್ಲಿ, ಮೇ. 19: ದೇಶದ ಹಲವು ರಾಜ್ಯಗಳಿಗೆ ಅಪ್ಪಳಿಸಿದ ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಪರಿಸ್ಥಿತಿ ಮತ್ತು ಹಾನಿಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಗುಜರಾಜ್ ಮತ್ತು ದಿಯು ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಕೊರೊನಾ ಸಂಕಷ್ಟದ ನಡುವೆ ಎದುರಾದ ತೌಕ್ತೆ ಚಂಡಮಾರುತ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಕಷ್ಟು ಪ್ರಮಾಣದ ನಷ್ಟವನ್ನುಂಟು ಮಾಡಿತು. ಪ್ರಮುಖವಾಗಿ ಗುಜರಾತ್ನ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದ ಚಂಡಮಾರುತದ ಹೊಡೆತಕ್ಕೆ ಗುಜರಾತ್, ದಿಯು ಪ್ರದೇಶದ ಕರಾವಳಿ ಭಾಗದಲ್ಲಿ ಅಪಾರ ಹಾಕಿ ಉಂಟಾಗಿತ್ತು.

ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗುಜರಾತ್, ದಿಯು, ಅಮ್ರೇಲಿ, ಗಿರ್ ಸೋಮ್ ನಾಥ್ ಮತ್ತು ಭಾವ್ ಜಿಲ್ಲೆ ವ್ಯಾಪ್ತಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಆ ಮೂಲಕ ತೌಕ್ತೆ ಚಂಡಮಾರುತದಿಂದ ಉಂಟಾಗಿರುವ ನಷ್ಟ ಹಾಗೂ ಪರಿಸ್ಥಿತಿಯ ಅವಲೋಕನ ನಡೆಸಿದರು.

ವೈಮಾನಿಕ ಸಮೀಕ್ಷೆ ಬಳಿಕ ಅಹಮದಾಬಾದ್ನಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇನ್ನಿತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ, ತೌಕ್ತೇ ಚಂಡಮಾರುತದಿಂದ ಉಂಟಾಗಿರುವ ನಷ್ಟ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದರು.

Exit mobile version