ಹೈದರಾಬಾದ್ ನ(Hyderabad) ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ(Gang Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ(AIMIM) ಶಾಸಕನ ಪುತ್ರ ಸೇರಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 6 ಮಂದಿಯ ಪೈಕಿ ನಾಲ್ವರು ಬಾಲಾರೋಪಿಗಳಾಗಿದ್ದು, ಮತ್ತೊಬ್ಬ ವಯಸ್ಕ ಆರೋಪಿಯ ಹೆಸರು ಸದುದ್ದೀನ್ ಮಲಿಕ್ ಎಂದು ಪೊಲೀಸರು ತಿಳಿಸಿದ್ದರು.
ಆದರೆ, ಈಗ ಈ ನಾಲ್ವರು ಅಪ್ರಾಪ್ತ ಆರೋಪಿಗಳಿಗೆ ಜಾಮೀನು(Bail) ನೀಡಲಾಗಿದ್ದು, ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಾಲಾಪರಾಧಿಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐದನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕಮ್ ಜುವೆನೈಲ್ ಜಸ್ಟೀಸ್ ಬೋರ್ಡ್ ಮಂಗಳವಾರ ಜಾಮೀನು ನೀಡಿದೆ. ಐದನೇ ಅಪ್ರಾಪ್ತ ಆರೋಪಿ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್ಗೆ(Telangana Highcourt) ಮೊರೆ ಹೋಗಿರುವುದರಿಂದ ಬಾಲಾಪರಾಧಿ ಗೃಹದಲ್ಲಿಯೇ ಇರುತ್ತಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದ ಏಕೈಕ ವಯಸ್ಕ ಆರೋಪಿ ಸಾದುದ್ದೀನ್ ಮಲ್ಲಿಕ್ನನ್ನು ಚಂಚಲಗುಡ ಜೈಲಿನಲ್ಲಿ ಇರಿಸಲಾಗಿದೆ. ಮೇ 28 ರಂದು ಹೈದರಾಬಾದ್ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿತ್ತು.