download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಸಿಎಂ ಆಗುವ ಆತುರ ನನಗಿಲ್ಲ, ಪಕ್ಷ ಅಧಿಕಾರಕ್ಕೆ ತರುವುದಷ್ಟೇ ನನ್ನ ಗುರಿ; ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ವ್ಯರ್ಥವಾಗುತ್ತದೆ.‌

ಬೆಂಗಳೂರು,ಜೂ.23: ಸಿಎಂ ಆಗುವ ಆತುರದಲ್ಲಿ ನಾನಿಲ್ಲ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಗುರಿ ಆಗಿದ್ದು, ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಅಂತಾ ನಾನೇ ಹೇಳಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ವ್ಯರ್ಥವಾಗುತ್ತದೆ.‌ ನಾವೆಲ್ಲರೂ ಬಿಜೆಪಿ ಮಣಿಸಲು ಶ್ರಮಿಸೋಣ. ನಾವೆಲ್ಲ ಕಾರ್ಯಕರ್ತರು. ಜನ ರಾಜ್ಯದಲ್ಲಿ ಬದಲಾವಣೆ ತರಲು ಬಯಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡೋಣ‌ ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ವಯಸ್ಸಿದೆ, ಸಿದ್ದರಾಮಯ್ಯ ಅವರು 2023ಕ್ಕೆ ಸಿಎಂ ಆಗಲಿ, ನಂತರ ಡಿ.ಕೆ. ಶಿವಕುಮಾರ್ ಆಗಲಿ ಎಂಬ ಶಾಸಕ ರಾಮಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಆಗಬೇಕೆಂಬ ಆತುರವಿದೆ ಎಂದು ನಾನು ಯಾವತ್ತಾದರೂ ಹೇಳಿದ್ದೀನಾ..? ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ವಿಧಾನಸೌಧದ ಮೂರನೇ ಮಹಡಿ ಏರಲು ನನ್ನನ್ನು ಮೆಟ್ಟಿಲಾಗಿ ಬಳಸಿಕೊಳ್ಳಿ ಅಂತಾ ನಾನು ಹೇಳಿದ್ದೇನೆ. ಯಾರು ಏನೇನು ಸಲಹೆ ಕೊಡುತ್ತಾರೋ, ಕೊಡಲಿ ಅದನ್ನು ಸ್ವೀಕರಿಸೋಣ’ ಎಂದರು.

ಈ ವಿಚಾರವಾಗಿ ನಮ್ಮ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಶಾಸಕರು ಹೇಳಿಕೆ ನೀಡುತ್ತಿದ್ದಾರೆ ಅಂತಾ ನೀವು ಹೇಳಿದ್ದೀರಿ, ನಾನೂ ಕೆಲವು ನೋಡಿದ್ದೇನೆ. ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅವರು ನೋಡಿಕೊಳ್ಳದಿದ್ದರೆ, ಆ ಬಗ್ಗೆ ಗಮನ ಹರಿಸಲು ಕಾಂಗ್ರೆಸ್ ಪಕ್ಷ ಬದುಕಿದೆ’ ಎಂದರು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article