Visit Channel

ಎಲ್ಲಾ ಶಾಸಕ ಮಿತ್ರರ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದೇನೆ: ಸಚಿವ ಸುಧಾಕರ್

WhatsApp Image 2021-03-22 at 11.57.47 AM

ಬೆಂಗಳೂರು, ಮಾ. 24: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 224 ಶಾಸಕರ ಬಗ್ಗೆಯೂ ತನಿಖೆ ನಡೆಯಲಿ, ಯಾರೆಲ್ಲಾ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದು ತನಿಖೆಯಿಂದ ಬಯಲಾಗಲಿ ಎಂದಿದ್ದರು. ಸಚಿವರ ಈ ಹೇಳಿಕೆ ರಾಜ್ಯದ ರಾಜಕೀಯ ನಾಯಕರ ಅಸಮಾಧಾನದ ಜತೆಗೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.

ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ ಎಂದು ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.