Visit Channel

ಬಾಂಗ್ಲಾ ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೂ ಹೋಗಿದ್ದೆ: ಬಾಂಗ್ಲಾದೇಶದ ಸ್ವಾತಂತ್ರೋತ್ಸವದಲ್ಲಿ ಮೋದಿ ಮಾತು

BANGLADESH-INDIA-DIPLOMACY

ಢಾಕಾ, ಮಾ. 27: ಎರಡು ದಿನಗಳ ವಿದೇಶಿ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಸದ್ಯ ಬಾಂಗ್ಲಾದಲ್ಲಿದ್ದು, ಸ್ವಾತಂತ್ರ್ಯ ಪಡೆದು 50 ವರ್ಷಗಳನ್ನು ಪೂರೈಸಿದ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ತಮ್ಮ ರಾಜಕೀಯ ಜೀವನದ ಮೊದಲ ಹೋರಾಟಗಳಲ್ಲಿ ಬಾಂಗ್ಲಾ ವಿಮೋಚನೆಯ ಹೋರಾಟವೂ ಒಂದು ಎಂದು ಮೋದಿ ಬಾಂಗ್ಲಾದೇಶದಲ್ಲಿ ತಿಳಿಸಿದ್ದಾರೆ.

‘ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟ ನನ್ನ ಜೀವನದ ಪ್ರಮುಖ ಅಂಗವೂ ಹೌದು. ನನ್ನ ಜೊತೆಗಾರರು ಮತ್ತು ನಾನು ಬಾಂಗ್ಲಾ ವಿಮೋಚನೆಗಾಗಿ ಸತ್ಯಾಗ್ರಹ ಕೈಗೊಂಡಿದ್ದೆವು. ಆಗ ನಾನು 20ರ ಹರೆಯದಲ್ಲಿದ್ದೆ. ಬಾಂಗ್ಲಾದೇಶ ಸ್ವಾತಂತ್ರ್ಯ ಹೋರಾಟದ ಸತ್ಯಾಗ್ರಹಕ್ಕಾಗಿ ಜೈಲಿಗೆ ಹೋಗುವ ಅವಕಾಶವನ್ನೂ ನಾನು ಪಡೆದಿದ್ದೆ’ ಎಂದು ಮೋದಿ ಹೇಳಿದ್ದಾರೆ.

1971ರ ಬಾಂಗ್ಲಾದೇಶ ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ಸೇನೆಯ ಕೊಡುಗೆಯನ್ನೂ ಅವರು ಸ್ಮರಿಸಿಕೊಂಡಿದ್ದಾರೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ತ್ಯಾಗ ಮಾಡಿದ ಬಾಂಗ್ಲಾ ಸೇನೆಯ ಹೋರಾಟವನ್ನು ಹಾಗೂ ಬಾಂಗ್ಲಾಕ್ಕೆ ಜೊತೆಯಾದ ಭಾರತೀಯ ಸೈನಿಕರ ಕೊಡುಗೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಸೈನಿಕರ ಧೈರ್ಯ ಮತ್ತು ಸ್ಥೈರ್ಯವನ್ನು ನಾವು ಮರೆತಿಲ್ಲ ಎಂದು ಮೋದಿ ಹೇಳಿದ್ದಾರೆ.

ಬಾಂಗ್ಲಾದೇಶ ಹಾಗೂ ಭಾರತ ಎರಡೂ ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಭವಿಷ್ಯಕ್ಕೆ ಬೇಕಾದ ದೂರದೃಷ್ಟಿ ಇದೆ. ಎರಡೂ ದೇಶಗಳು ಒಟ್ಟಾಗಿ ಅಭಿವೃದ್ಧಿ ಹೊಂದುವುದು ಕೂಡ ಅಗತ್ಯವಿದೆ. ಅದೇ ಕಾರಣಕ್ಕೆ ಭಾರತ ಹಾಗೂ ಬಾಂಗ್ಲಾದೇಶ ಸರ್ಕಾರಗಳು ಈ ನೆಲೆಯಲ್ಲಿ ಅರ್ಥಪೂರ್ಣ ಪ್ರಯತ್ನ ಮಾಡುತ್ತಿದೆ ಎಂದು ಮೋದಿ ಹೇಳಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.