ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್ಸ್ ಬಂಧನ: 1 ಕೋಟಿ ರೂ.‌ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು, ಡಿ. 25: ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬೈಯಪ್ಪಳ್ಳಿ ಹಾಗೂ ಅಲಸೂರು ಪೊಲೀಸರು, ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದು, ಇವರುಗಳಿಂದ ಅಂದಾಜು 1 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡ್ರಗ್ಸ್ ದಂಧೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿರಿಯ ಅಧಿಕಾರಿಗಳು, ಅಪರಾಧ ಪತ್ತೆ ಮಾಡಿದ ತಂಡಕ್ಕೆ 40,000 ರೂ. ಹಾಗೂ ಪ್ರಶಂಸನಾ ಪತ್ರ ನೀಡಿದ್ದಾರೆ.

Exit mobile version