ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಇರಾನ್,ಜೂ.19: ಇರಾನ್‌ನ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಅವರು ಆಯ್ಕೆಯಾಗಿದ್ದು, ವಿದೇಶಾಂಗ ಸಚಿವ ಮೊಹಮ್ಮದ್ ಜಾವಾದ್ ಜರೀಫ್ ಶನಿವಾರ ರೈಸಿ ಅವರ ಆಯ್ಕೆಯನ್ನು ಘೋಷಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿತ್ತು. ರೈಸಿ ಅವರ ಪರ 1.78 ಕೋಟಿ ಮತಗಳು ಚಲಾವಣೆಯಾಗಿವೆ. ರೈಸಿ ಅವರ ಪ್ರತಿಸ್ಪರ್ಧಿಯಾಗಿದ್ದ ಮೊಹಸೆನ್‌ ರೆಝಿ 33 ಲಕ್ಷ ಹಾಗೂ ಹೆಮ್ಮಟ್ಟಿ 24 ಲಕ್ಷ ಮತಗಳನ್ನು ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

60 ವರ್ಷದ ರೈಸಿ ಅವರು ಆಗಸ್ಟ್‌ನಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇರಾನ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಬ್ರಾಹಿಂ ರೈಸಿ ಅವರು ಕಾರ್ಯನಿರ್ವಹಿಸಿದ್ದರು.

ರೈಸಿ ಅವರ ಆಯ್ಕೆಗೆ ಶುಭಾಶಯ ಕೋರಿರುವ ಇರಾನ್‌ ಹಾಲಿ ಅಧ್ಯಕ್ಷ ಮತ್ತು ಅಧ್ಯಕ್ಷೀಯ ಚುನಾವಣೆಯ ಪ್ರತಿಸ್ಪರ್ಧಿ ಹಸನ್‌ ರೌಹಾನಿ ಅವರು,‘ಜನರು ತಮ್ಮ ನಾಯಕನನ್ನು ಆರಿಸಿದ್ದಾರೆ. ಅವರಿಗೆ ಅಭಿನಂದನೆಗಳು’ ಎಂದಿದ್ದಾರೆ.

Exit mobile version