ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತ

ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್‌ ಬಿಡುಗಡೆಗೊಳಿಸಿದ್ದು ಇದರಲ್ಲಿ ಭಾರತದ  ಅನುಭವಿ ಆಟಗಾರ ಆರ್.ಅಶ್ವಿನ್ ಆಲ್‌ರೌಂಡರ್ ಮತ್ತು ಬೌಲರ್ಗಳ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಂಡಿದ್ದಾರೆ.

ಐಸಿಸಿ ಆಲ್‌ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ ಅವರು ಮೂರನೇ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮಾರ್ನಸ್ ಲಬುಶೇನ್ ಅಗ್ರಸ್ಥಾನದಲ್ಲಿದ್ದಾರೆ, ಇಂಗ್ಲೆಂಡ್ ತಂಡದ ನಾಯಕ  ಜೋ ರೂಟ್ 2ನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಪನ್ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ

ಭಾರತದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ ಐದು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ರೋಹಿತ್ 797 ಮತ್ತು ಕೊಹ್ಲಿ 756 ರೇಟಿಂಗ್ ಹೊಂದಿದ್ದಾರೆ. ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಗ್ರಸ್ಥಾನಕ್ಕೇರಿದ್ದಾರೆ

ತಂಡಗಳ ವಿಭಾಗದಲ್ಲಿ 124 ರೇಟಿಂಗ್ ಅಂಕಗಳನ್ನು ಹೊಂದಿರುವ ಭಾರತ ತಂಡ ಅಗ್ರಸ್ಥಾನವನ್ನ ಕಾಯ್ದುಕೊಂಡಿದೆ. ತಂಡ ವಿಭಾಗದಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ನಂತರದ ಎರಡು ಸ್ಥಾನಗಳಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಕಾಯ್ದುಕೊಂಡಿವೆ

Exit mobile version