ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಟೀಂ ಇಂಡಿಯಾಕ್ಕೆ ನಂ.1 ಸ್ಥಾನ; 2ನೇ ಸ್ಥಾನ ಕಾಯ್ದುಕೊಂಡ ಕಿವೀಸ್ ಪಡೆ

ಹೊಸದಿಲ್ಲಿ, ಮೇ. 13: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಹೊಸದಾಗಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ನಂ.1 ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.  

ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ಸು ಸಾಧಿಸಿದ್ದ ಕೊಹ್ಲಿ ಪಡೆ, ಫೈನಲ್ ಪ್ರವೇಶ ಪಡೆದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಐಸಿಸಿ ಪ್ರಕಟಿಸಿದ ಪರಿಷ್ಕೃತ ಟೆಸ್ಟ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತ ತಂಡ 121 ರೇಟಿಂಗ್ ಅಂಕಗಳೊಂದಿಗೆ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದೆ.

ಭಾರತ 121 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದರೆ. ಜೂನ್ ತಿಂಗಳಲ್ಲಿ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣೆಸಲಿರುವ ನ್ಯೂಜಿಲೆಂಡ್‌ ತಂಡ 120 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು ಇಂಗ್ಲೆಂಡ್ ತಂಡ ಒಂದು ಸ್ಥಾನ ಏರಿಕೆ ಕಂಡು 109 ರೇಟಿಂಗ್‌ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿದ್ದರೆ, ಆಸ್ಟ್ರೇಲಿಯಾ 4ನೇ ಸ್ಥಾನಕ್ಕೆ ಕುಸಿದಿದ್ದರೆ, ಪಾಕಿಸ್ತಾನ 94 ರೇಟಿಂಗ್ ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಜೂನ್ 18ರಿಂದ ಆರಂಭವಾಗಲಿದೆ. ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಬಳಿಕ ಯಾವ ತಂಡ ನಂ.1 ಸ್ಥಾನದಲ್ಲಿರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Exit mobile version