Bengaluru : ಜಾತ್ಯಾತೀತ ಜನತಾದಳ (If I Become CM) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ರಾಜ್ಯದ ಎಲ್ಲ ಜನರಿಗೂ ಉಚಿತ ಶಿಕ್ಷಣ,
ಉದ್ಯೋಗ ಮತ್ತು ಕುಟುಂಬಕ್ಕೊಂದು ಮನೆ ನೀಡುತ್ತೇನೆ ಎಂದು ಜೆಡಿಎಸ್ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಘೋಷಣೆ ಮಾಡಿದ್ದಾರೆ.

ನವೆಂಬರ್ 1ರಿಂದ ಪ್ರಾರಂಭವಾಗಲಿರುವ ಜೆಡಿಎಸ್ನ ಪಂಚರತ್ನ ರಥಯಾತ್ರೆಗೆ (If I Become CM) ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದ ಅವರು,
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳ ಸಂಪೂರ್ಣವಾಗಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ ಚಿತ್ರಣವನ್ನೇ ನಾವು ಬದಲಿಸುತ್ತೇವೆ.
ಎಲ್ಲ ಮಕ್ಕಳಿಗೂ ಉಚಿತ ಶಿಕ್ಷಣ, ಪ್ರತಿ ಯುವಕನಿಗೂ ಉದ್ಯೋಗ, ಪ್ರತಿ ವ್ಯಕ್ತಿಗೂ ಆರೋಗ್ಯ ಸೇವೆ, ರೈತರ ಆದಾಯ ಹೆಚ್ಚಿಸಲು ರೈತ ಚೈತನ್ಯ ಮತ್ತು ಪ್ರತಿ ಕುಟುಂಬಕ್ಕೂ ಒಂದು ಮನೆ ಕೊಡುವ ಯೋಜನೆ ಜಾರಿ ಮಾಡುತ್ತೇನೆ.
ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ಇದನ್ನೂ ಓದಿ : https://vijayatimes.com/warning-report/
ಇದೇ ವೇಳೆ ಬಿಜೆಪಿ(BJP) ಮತ್ತು ಕಾಂಗ್ರೆಸ್(Congress) ವಿರುದ್ದ ವಾಗ್ದಾಳಿ ನಡೆಸಿದ ಅವರು, ಈ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದ ಜನತೆಗೆ ಮೋಸ ಮಾಡುತ್ತಿವೆ. ಇವರಿಬ್ಬರೂ ಯಾವುದೇ ಪಾದಯಾತ್ರೆ, ಸಂಕಲ್ಪ ಯಾತ್ರೆ ಮಾಡಿದರು ರಾಜ್ಯದ ಜನರು ನಂಬುವುದಿಲ್ಲ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪಾಪದ ಕೊಡ ತುಂಬಿದೆ ಎಂದು ಟೀಕಿಸಿದರು. ಇನ್ನು ನವೆಂಬರ್ 1ರಿಂದ ಕೋಲಾರದ ಮುಳಬಾಗಿಲಿನಿಂದ ಜೆಡಿಎಸ್‌ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ.
ರಾಜ್ಯದ 36 ವಿಧಾನಸಭಾ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗಲಿದ್ದು, ಜೆಡಿಎಸ್ ಪಕ್ಷದ ಕೊಡುಗೆ ಮತ್ತು ಅಭಿವೃದ್ದಿ ಮಾದರಿಗಳನ್ನು ರಾಜ್ಯದ ಜನತೆಗೆ ತಿಳಿಸುತ್ತದೆ.

2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ನ 100 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಈ ವೇಳೆ ಸ್ಪಷ್ಟಪಡಿಸಿದರು.
- ಮಹೇಶ್.ಪಿ.ಎಚ್