5ನೇ ತರಗತಿವರೆಗೆ ಶಾಲೆ ತೆರೆದರೆ ಕ್ರಮ: ಸಚಿವ ಸುರೇಶ್‌ ಕುಮಾರ್

ಬೆಂಗಳೂರು, ಮಾ. 12: ಸರ್ಕಾರದ ಆದೇಶ ಮೀರಿ 1 ರಿಂದ 5ನೇ ತರಗತಿಗಳನ್ನು ಆರಂಭಿಸಿರುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ 1 ರಿಂದ 5ನೇ ತರಗತಿ ಶಾಲೆಗಳನ್ನು ಆರಂಭಿಸಲು ಆರೋಗ್ಯ ಇಲಾಖೆ ಅನುಮತಿ ನೀಡಿಲ್ಲ. ಹಾಗಿದ್ದರೂ ಕೆಲ ಖಾಸಗಿ ಶಾಲೆಗಳು ಸರ್ಕಾರದ ಆದೇಶ ಮೀರಿ ತರಗತಿ ನಡೆಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ, ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ನಿಯಮ ಉಲ್ಲಂಘಿಸಿ ತರಗತಿಯನ್ನು ಪುನರಾರಂಭಿಸಿರುವ ಶಾಲೆಗಳ ಪರವಾನಿಗೆ ರದ್ದು ಮಾಡುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ನಿನ್ನೆಯಷ್ಟೇ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಅವರು, ಸರ್ಕಾರದ ಆದೇಶ ಮೀರಿ ತರಗತಿಗಳನ್ನು ನಡೆಸುತ್ತಿರುವ ಖಾಸಗಿ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದರು.

Exit mobile version