Visit Channel

ಮುಂದಿನ ಸಿಎಂ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ: ಸಿದ್ದುಗೆ ಎಚ್‌ಡಿಕೆ ಟಾಂಗ್‌

siddaramaiah-710x400xt-jpg

ಬೆಂಗಳೂರು, ಮೇ. 03: ಅಲ್ಪಸಂಖ್ಯಾತರು ಹಾಗೂ ಜೆಡಿಎಸ್‌ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ.. ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ.

ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ ಎಂದಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.