Visit Channel

IFS ಹುದ್ದೆಗಳಿಗೆ ಅರ್ಜಿ ಆಹ್ವಾನ!

job

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ವತಿಯಿಂದ 2022ನೇ ಸಾಲಿನ IFS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 151

indian forest officer

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ವಿಜ್ಞಾನ ವಿಷಯದಲ್ಲಿ ಪದವಿ ( ಸಸ್ಯಶಾಸ್ತ್ರ, ಜೀವಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ ಗಣಿತ) ಅಥವಾ ಕೃಷಿ ಅಥವಾ ಅರಣ್ಯಶಾಸ್ತ್ರ ಅಥವಾ ಪಶುಸಂಗೋಪನೆ, ಪಶು ವೈದ್ಯಕೀಯ ವಿಷಯಗಳಲ್ಲಿ ಪದವಿ ಪಡೆದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯಸ್ಸು : ಕನಿಷ್ಠ 21 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳು : ಗರಿಷ್ಠ 32 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳು : ಗರಿಷ್ಠ 35 ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು : 37 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 42 ವರ್ಷಗಳು

recruitment

ನೇಮಕಾತಿ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿರುವುದಿಲ್ಲ.

online exams

ಅರ್ಜಿ ಸಲ್ಲಿಸುವ ವಿಧಾನ :

ಲೋಕಸೇವಾ ಆಯೋಗದ ವೆಬ್ಸೈಟ್ https://upsc-gov.in ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿಯನ್ನು ಎರಡು ಹಂತಗಳಲ್ಲಿ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 22-02-2022

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.