ಬೆಂಗಳೂರಿನಲ್ಲಿ ಮುಂದುವರೆದ ಅಕ್ರಮ (illegal Bangladeshi immigrants deportation) ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ
ಇದುವರೆಗೆ 272 ಬಾಂಗ್ಲಾ ವಲಸಿಗರ ಗಡಿಪಾರು
ತ್ರಿಪುರಾ ಗಡಿ ಮೂಲಕ ವಲಸಿಗರ ಗಡಿಪಾರು: ಇನ್ನಷ್ಟು ವಲಸಿಗರ ಪತ್ತೆಗೆ ಪೊಲೀಸರ ಶೋಧ ಮುಂದುವರಿಕೆ
Bengaluru: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ವಿರುದ್ಧ ಪೊಲೀಸರು (illegal Bangladeshi immigrants deportation) ಕೈಗೊಂಡ ವಿಶೇಷ ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ ಒಟ್ಟು 272 ಅಕ್ರಮ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡಲಾಗಿದೆ.
ನಗರದಲ್ಲಿನ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ (CCB) ಪೊಲೀಸರು
ನಡೆಸುತ್ತಿದ್ದು, ಅಕ್ರಮ ವಲಸಿಗರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಪಾರು ಮಾಡಲಾದವರಲ್ಲಿ 178 ಪುರುಷರು, 94 ಮಹಿಳೆಯರು ಹಾಗೂ ಮಕ್ಕಳೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಈ ಎಲ್ಲರನ್ನು ಪತ್ತೆಹಚ್ಚಿ ಒಟ್ಟಾಗಿ ಗಡಿಪಾರು ಮಾಡುವ ಪ್ರಕ್ರಿಯೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ (illegal Bangladeshi immigrants deportation) ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಿ ನಗರಾದ್ಯಂತ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈಗಾಗಲೇ ಹಲವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದ್ದು, ಮುಂದುವರೆದ ದಿನಗಳಲ್ಲಿ ಇನ್ನಷ್ಟು ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ.
ಈ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಕಾರ್ಯವನ್ನು ತ್ರಿಪುರಾ ಗಡಿ ಮೂಲಕ ನಡೆಸಲಾಗುತ್ತಿದೆ. ಬಾರ್ಡರ್ ಸೆಕ್ಯುರಿಟಿ ಫೋರ್ಸ್ (Border Security Force) ಸಹಕಾರದಿಂದ
ಇವರನ್ನು ಗಡಿಪಾರು ಮಾಡಲಾಗುತ್ತಿದೆ. ಇತ್ತೀಚಿನ ರಾಜಕೀಯ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಅಕ್ರಮ ವಲಸಿಗರ ವಿರುದ್ಧ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ದೇಶದ ಭದ್ರತಾ ದೃಷ್ಟಿಯಿಂದ ಈ ಕಾರ್ಯಾಚರಣೆ ಮಹತ್ವದ್ದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಕ್ರಮ ವಲಸಿಗರು ಭಾರತಕ್ಕೆ ಪ್ರವೇಶಿಸುವ ವಿಧಾನವೂ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೂವರು ಮಧ್ಯವರ್ತಿಗಳ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶ
ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿದೆ. ಒಬ್ಬ ಮಧ್ಯವರ್ತಿ ಗಡಿಯವರೆಗೂ ಕರೆತರುತ್ತಿದ್ದರೆ, ಮತ್ತೊಬ್ಬ ಗಡಿ ದಾಟಿಸಿ ದೇಶದೊಳಗೆ ಕರೆತರುತ್ತಿದ್ದನು.
ನಂತರ ಮೂರನೇ ವ್ಯಕ್ತಿ ಅವರಿಗೆ ಕೆಲಸ ವ್ಯವಸ್ಥೆ ಮಾಡಿಕೊಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯವರ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ಅಕ್ರಮ ವಲಸಿಗರ ಪತ್ತೆಗೆ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅಕ್ರಮವಾಗಿ ನೆಲೆಸಿರುವವರನ್ನು
ಗುರುತಿಸಿ ಗಡಿಪಾರು ಮಾಡುವ ಕೆಲಸ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಅಕ್ರಮ ವಾಸ ಹಾಗೂ ಅಕ್ರಮ ಉದ್ಯೋಗ ವ್ಯವಸ್ಥೆ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಕಾರ್ಯಾಚರಣೆ ಮುಂದುವರಿದರೆ ಇನ್ನಷ್ಟು ಅಕ್ರಮ ವಲಸಿಗರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.