• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಕ್ರಮ ಗ್ಯಾಸ್ ಸಿಲಿಂಡರ್ ದಾಸ್ತಾನು: ಎಲ್‌ಪಿಜಿ ಪೂರೈಕೆ ಗೊಂದಲ ತಪ್ಪಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಅಕ್ರಮ ಗ್ಯಾಸ್ ಸಿಲಿಂಡರ್ ದಾಸ್ತಾನು: ಎಲ್‌ಪಿಜಿ ಪೂರೈಕೆ ಗೊಂದಲ ತಪ್ಪಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮ
0
SHARES
22
VIEWS
Share on FacebookShare on Twitter
  • ಅಕ್ರಮ ದಾಸ್ತಾನು ಹಾಗೂ ಕಾಳಸಂತೆ ಮಾರಾಟದ (Illegal Gas Cylinder Stock) ವಿರುದ್ಧ ಪೊಲೀಸರ ಎಚ್ಚರಿಕೆ
  • ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ಯಾಸ್ ಗೋದಾಮುಗಳ ಮೇಲೆ ಪೊಲೀಸ್ ನಿಗಾ
  • ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಪ್ರಕರಣ ದಾಖಲು

Bengaluru: ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ (Illegal Gas Cylinder Stock) ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಈ ಹಿನ್ನೆಲೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ

ನೀಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಜಿ–ಐಜಿಪಿ ಡಾ. ಎಂ.ಎ. ಸಲೀಂ (Dr. M.A. Salim) ಸೂಚನೆ ನೀಡಿದ್ದಾರೆ.

Illegal Gas Cylinder Stock

ಜಾಗತಿಕ ಉದ್ವಿಗ್ನತೆ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯ ಆತಂಕ (Illegal Gas Cylinder Stock) ವ್ಯಕ್ತವಾಗುತ್ತಿರುವುದರಿಂದ,

ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ನಿಗಾವಹಿಸಲು ಸೂಚಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಗೋದಾಮುಗಳ ಮೇಲೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಸಿಲಿಂಡರ್ ಸಂಗ್ರಹ ಮತ್ತು ವಿತರಣೆಯ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ.

ನಗರದ ವಿವಿಧ ಗೋದಾಮುಗಳಿಗೆ ಹೊಯ್ಸಳ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಲಭ್ಯವಿರುವ ಸಿಲಿಂಡರ್‌ಗಳ ಸಂಖ್ಯೆ, ಬಂದಿರುವ ಆರ್ಡರ್‌ಗಳು ಹಾಗೂ ಗ್ರಾಹಕರಿಗೆ ನೀಡಲಾಗುತ್ತಿರುವ ವಿತರಣೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ಪಿಎಸ್‌ಐ ಮಟ್ಟದ ಅಧಿಕಾರಿಗಳು ಖುದ್ದಾಗಿ ಗೋದಾಮುಗಳಿಗೆ ಭೇಟಿ ನೀಡಿ ಸಂಪೂರ್ಣ ವರದಿ ಸಿದ್ಧಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಯಾವುದೇ ಅಕ್ರಮ ಕಂಡುಬಂದರೆ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ, ಗೋದಾಮುಗಳಲ್ಲಿ ಸಿಲಿಂಡರ್ ಇದ್ದರೂ ಇಲ್ಲವೆಂದು ಹೇಳಿ ಕೃತಕ ಅಭಾವ ಸೃಷ್ಟಿಸಿದರೆ ಅಥವಾ ನಿಗದಿತ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ

ಮಾಡಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಗ್ಯಾಸ್ ಏಜೆನ್ಸಿಗಳು ಅಥವಾ ವ್ಯಾಪಾರಿಗಳು ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದರೆ ಅಥವಾ ಸಿಲಿಂಡರ್ ಇಲ್ಲವೆಂದು ತಪ್ಪು ಮಾಹಿತಿ ನೀಡುತ್ತಿದ್ದರೆ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್‌ಪಿಜಿ ಪೂರೈಕೆಯ ಪರಿಸ್ಥಿತಿಯನ್ನು

ಪರಿಶೀಲಿಸಿದ್ದಾರೆ. ಆಸ್ಪತ್ರೆಗಳು, ಪಿಜಿ ವಸತಿಗಳು ಹಾಗೂ ಅಗತ್ಯ ಸೇವೆಗಳಿಗೆ ಗ್ಯಾಸ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಹೋಟೆಲ್‌ಗಳು ಹಾಗೂ ವ್ಯಾಪಾರಿಕ ಬಳಕೆದಾರರು ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸಬಾರದು ಮತ್ತು ಕಾಳಸಂತೆಯಲ್ಲಿ ಮಾರಾಟವಾಗದಂತೆ ಪೊಲೀಸ್, ಸಾರಿಗೆ ಹಾಗೂ ಆಹಾರ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.

ಇದನ್ನು ಓದಿ : https://vijayatimes.com/usa-condition-to-stop-war/

Tags: bengalurucylinderfuelIranLPG

Related News

ಹುಲಿ ಸಫಾರಿಗೆ ಹೋಗುವ ಮುನ್ನ ಎಚ್ಚರಿಕೆ: ಮೊಬೈಲ್ ಬಳಕೆಗೆ ನಿರ್ಬಂಧ, ಪ್ರವಾಸಿಗರಿಗೆ ಹೊಸ ಮಾರ್ಗಸೂಚಿ
ಪ್ರಮುಖ ಸುದ್ದಿ

ಹುಲಿ ಸಫಾರಿಗೆ ಹೋಗುವ ಮುನ್ನ ಎಚ್ಚರಿಕೆ: ಮೊಬೈಲ್ ಬಳಕೆಗೆ ನಿರ್ಬಂಧ, ಪ್ರವಾಸಿಗರಿಗೆ ಹೊಸ ಮಾರ್ಗಸೂಚಿ

October 12, 2026
ಸ್ಟಿಂಗ್ ನಡೆಯುತ್ತಿರುವುದು ಗೊತ್ತಿದೆ : ಕಾರ್ಯಾಚರಣೆಯ ಹಿಂದಿನ ಸತ್ಯ ಬಹಿರಂಗವಾಗಬೇಕಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಸ್ಟಿಂಗ್ ನಡೆಯುತ್ತಿರುವುದು ಗೊತ್ತಿದೆ : ಕಾರ್ಯಾಚರಣೆಯ ಹಿಂದಿನ ಸತ್ಯ ಬಹಿರಂಗವಾಗಬೇಕಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 12, 2026
ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹೊಸ ಕ್ರಮ: ಪ್ರತಿ ಮಂಗಳವಾರ ಫೋನ್‌-ಇನ್ ಕಾರ್ಯಕ್ರಮ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹೊಸ ಕ್ರಮ: ಪ್ರತಿ ಮಂಗಳವಾರ ಫೋನ್‌-ಇನ್ ಕಾರ್ಯಕ್ರಮ

October 12, 2026
ಸಿಇಸಿ ರಾಜೀನಾಮೆಗೆ ಪಟ್ಟು: ಸುಪ್ರೀಂ ಕೋರ್ಟ್‌ವರೆಗೆ ಇಂಡಿಯಾ ಮೈತ್ರಿಕೂಟದ ಮೆರವಣಿಗೆ
ದೇಶ-ವಿದೇಶ

ಸಿಇಸಿ ರಾಜೀನಾಮೆಗೆ ಪಟ್ಟು: ಸುಪ್ರೀಂ ಕೋರ್ಟ್‌ವರೆಗೆ ಇಂಡಿಯಾ ಮೈತ್ರಿಕೂಟದ ಮೆರವಣಿಗೆ

October 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.