ಪಿಎಸ್​ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ

Bengaluru: ರಾಜ್ಯ ಸರ್ಕಾರಕ್ಕೆ ಪಿಎಸ್​ಐ (PSI) ನೇಮಕಾತಿ ಅಕ್ರಮಕ್ಕೆ (Illegal recruitment-PSI Scam) ಸಂಬಂಧಿಸಿದ ವರದಿ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ

ಸಲ್ಲಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ಹೈಕೋರ್ಟ್​ನ (Highcourt) ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ (B Veerappa) ನೇತೃತ್ವದಲ್ಲಿ ಸಲ್ಲಿಸಲಾಗಿತ್ತು.


ಕೊನೆಗೂ ಕೈಸೇರಿರುವ ಪಿಎಸ್​ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ವರದಿಯನ್ನು ಮೊದಲು ಸಚಿವ ಸಂಪುಟದ ಮುಂದೆ ಮಂಡಿಸಲು, ಆಮೇಲೆ ಜಂಟಿ ಅಧಿವೇಶನದಲ್ಲಿ ಮಂಡಿಸಲು

ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ಹಲವು ರಾಜಕಾರಣಿಗಳು ವಿಚಾರಣೆಗೆ ಸಹಕರಿಸದ ಬಗ್ಗೆಯೂ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಲಾಗಿದೆ. ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ,

ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆಂಬ ಆರೋಪವನ್ನೂ ಮಾಡಲಾಗಿದೆ. ನೋಟಿಸ್​ (Notice)

ನೀಡಿದ್ದರೂ ಕೆಲವು ಪ್ರಭಾವಿಗಳು ಗೈರಾದ ಬಗ್ಗೆಯೂ (Illegal recruitment-PSI Scam) ಉಲ್ಲೇಖಿಸಲಾಗಿದೆ.

ವರದಿಯಲ್ಲಿನ್ನ ಅಂಶಗಳನ್ನು ಸದ್ಯದ ಮಟ್ಟಿಗೆ ಗೋಪ್ಯವಾಗಿರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದೂ ಹೇಳಲಾಗಿದೆ. ಸಮಿತಿ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್​​​​​ನ ಮುಂದಿಡಲು ಮುಖ್ಯಮಂತ್ರಿಗಳು

ಚಿಂತನೆ ಮಾಡಿದ್ದಾರೆ. ಅದಾದ ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲು ಅವರು ಯೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದ್ದ

ಪಿಎಸ್​ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಮರು ತನಿಖೆಗಾಗಿ ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಸಮಿತಿ ರಚಿಸಿತ್ತು.

ಏನಿದು ಅಕ್ರಮ?
ಕಳೆದ ವರ್ಷದ ಅಕ್ಟೋಬರ್ (October) 3 ರಂದು ಬೆಂಗಳೂರು (Bengaluru) ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ 545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ಲಿಖಿತ

ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ

ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಸರ್ಕಾರವು ಈ ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆಯನ್ನು ಸಿಐಡಿಗೆ (CID) ವಹಿಸಿತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಹಿನ್ನೆಲೆ ಪಿಎಸ್ಐ ನೇಮಕಾತಿ

ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್​ಗಳ (Brokers) ಹಂತದಲ್ಲಿಯೂ ಕನಿಷ್ಠ 10ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ 30-35 ಲಕ್ಷ ತಲುಪುತ್ತಿತ್ತು

ಎಂಬ ಅಂಶ ತಿಳಿದುಬಂದಿತ್ತು.

Exit mobile version